ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Calcutta High Court: ನಾವು ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ; ಬಂಗಾಳ ವಕ್ಫ್ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಮಾತು

ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಲ್ಕತ್ತಾ ಹೈಕೋರ್ಟ್, ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕಿದೆ

ಬಂಗಾಳ ವಕ್ಫ್ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಹೇಳಿದ್ದೇನು?

Profile Vishakha Bhat Apr 13, 2025 8:53 AM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಲ್ಕತ್ತಾ ಹೈಕೋರ್ಟ್, (Calcutta High Court) ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕಿದೆ ಮತ್ತು ಪ್ರತಿಯೊಬ್ಬ ನಾಗರಿಕನ ಜೀವ ಮತ್ತು ಆಸ್ತಿಯನ್ನು ಸುರಕ್ಷಿತಗೊಳಿಸುವುದು ರಾಜ್ಯದ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಸಾಂವಿಧಾನಿಕ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿ, ಮುರ್ಷಿದಾಬಾದ್‌ನಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.

ವಕ್ಫ್ ತಿದ್ದುಪಡಿ ಮಸೂದೆಯನ್ನು ಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಪೊಲೀಸ್ ವ್ಯಾನ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು, ಭದ್ರತಾ ಪಡೆಗಳ ಮೇಲೆ ಕಲ್ಲು ಎಸೆಯಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಗಿತ್ತು. ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದರು. ಘಟನೆ ಬಗ್ಗೆ ಕಳವಳ ವ್ಯಕ್ತ ಪಡಿಸಿದ ಹೈಕೋರ್ಟ್‌ ಜನರ ಸುರಕ್ಷತೆ ಮತ್ತು ಭದ್ರತೆ ಅಪಾಯದಲ್ಲಿದ್ದಾಗ ಸಾಂವಿಧಾನಿಕ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿ ಇರಬಾರದು ಪರಿಸ್ಥಿತಿ "ಗಂಭೀರ ಮತ್ತು ಅಸ್ಥಿರವಾಗಿದೆ" ಎಂದು ನ್ಯಾಯಾಲಯವು ಗಮನಿಸಿದ್ದು, ಅಮಾಯಕ ನಾಗರಿಕರ ಮೇಲೆ ನಡೆದ ದೌರ್ಜನ್ಯಗಳನ್ನು ಸಹಿಸುವುದಿಲ್ಲ. ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಿ ಹೇಳಿದೆ.

ಪಶ್ಚಿಮ ಬಂಗಾಳ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿವೆ ಎಂದು ಪ್ರಾಥಮಿಕವಾಗಿ ಕಂಡುಬಂದಿರುವ ವಿವಿಧ ವರದಿಗಳನ್ನು ನಾವು ನಿರ್ಲಕ್ಷಿಸುವಂತಿಲ್ಲ. ಪ್ಯಾರಾ-ಮಿಲಿಟರಿ ಪಡೆಗಳು ಅಥವಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಿಯೋಜನೆಯ ಉದ್ದೇಶವು ಈ ರಾಜ್ಯದ ಜನಸಂಖ್ಯೆಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಆಡಳಿತವನ್ನು ಸುಗಮಗೊಳಿಸುವ ಉದ್ದೇಶಕ್ಕಾಗಿ ಮಾತ್ರ" ಎಂದು ನ್ಯಾಯಾಲಯವು ಹೇಳಿತು. ಜಿಲ್ಲೆಯಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಕೋರಿ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿಗಳು ನ್ಯಾಯಮೂರ್ತಿಗಳಾದ ಸೌಮೆನ್ ಸೇನ್ ಮತ್ತು ರಾಜಾ ಬಸು ಚೌಧರಿ ಅವರನ್ನೊಳಗೊಂಡ ವಿಶೇಷ ಪೀಠವನ್ನು ರಚಿಸಿದರು.

ಈ ಸುದ್ದಿಯನ್ನೂ ಓದಿ: West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ- ಕಚ್ಚಾ ಬಾಂಬ್‌ ಎಸೆದು ಅಟ್ಟಹಾಸ

ಮುರ್ಷಿದಾಬಾದ್ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ ನಿರ್ದೇಶನವನ್ನು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಶನಿವಾರ ರಾತ್ರಿ ಶ್ಲಾಘಿಸಿದ್ದಾರೆ. ಮುರ್ಷಿದಾಬಾದ್ ಸೇರಿದಂತೆ ಬಂಗಾಳದ ಗಲಭೆ ಪೀಡಿತ ಪ್ರದೇಶಗಳಲ್ಲಿ ಸಿಎಪಿಎಫ್ ನಿಯೋಜಿಸುವ ಬಗ್ಗೆ ನನಗೆ ತಿಳಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್ ಮಧ್ಯಪ್ರವೇಶಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ನೀಡಿದೆ ಎಂದು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.