ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಸಹಾಯಕನ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ

ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಪಶ್ಚಿಮ ಬಂಗಾಳದಲ್ಲಿ ಘರ್ಷಣೆಗಳು ಉಂಟಾಗಿದ್ದವು. ಉತ್ತರ 24 ಪರಗಣ ಜಿಲ್ಲೆಯಲ್ಲಿ ಮೇ 4ರಂದು ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದ್ದು, ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.

ಸುವೇಂದು ಅಧಿಕಾರಿ ಸಹಾಯಕನ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ

ಸಂಗ್ರಹ ಚಿತ್ರ -

ಕೋಲ್ಕತ್ತಾ: ಪಶ್ಚಿಮ ಬಂಗಾಳದ (west bengal) ಮುಖ್ಯಮಂತ್ರಿ ಸುವೇಂದು ಅಧಿಕಾರಿ (CM Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ ರಥ ಅವರ ಹತ್ಯೆಯ (Murder case) ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (Central Bureau of Investigation) ವಹಿಸಲಾಗಿದೆ. ವಿಧಾನ ಸಭಾ ಚುನಾವಣೆಯ (assembly election) ಫಲಿತಾಂಶ ಘೋಷಣೆಯಾದ ಬಳಿಕ ಪಶ್ಚಿಮ ಬಂಗಾಳದಲ್ಲಿ ಘರ್ಷಣೆಗಳು ನಡೆದಿದ್ದು, ಉತ್ತರ 24 ಪರಗಣ ಜಿಲ್ಲೆಯಲ್ಲಿ ಮೇ 4ರಂದು ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

ಚಂದ್ರನಾಥ ರಥ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ಪಶ್ಚಿಮ ಬಂಗಾಳ ಪೊಲೀಸರು ಈ ಹಿಂದೆಯೇ ಶಿಫಾರಸು ಮಾಡಿದ್ದರು. ಮಂಗಳವಾರ ಪ್ರಕರಣಕ್ಕೆ ಸಂಬಂಧಿಸಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸಂಸ್ಥೆ ರಾಜ್ಯ ಪೊಲೀಸರಿಂದ ತನಿಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದೆ.

ಪ್ರಧಾನಿ ಮೋದಿ ಬಳಿಕ ಹಿಮಂತ ಬಿಸ್ವಾ ಶರ್ಮಾ ಮೇಲೆ ದಾಳಿಗೆ ಸಂಚು? ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗುಂಡುಗಳೊಂದಿಗೆ ಬಂದಿದ್ದ ವ್ಯಕ್ತಿಯ ಬಂಧನ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಬಿಐ, ಚಂದ್ರನಾಥ ರಥ ಅವರ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗುವುದು. ಕೋಲ್ಕತ್ತಾ ವಲಯದ ಜಂಟಿ ನಿರ್ದೇಶಕ, ವಲಯ ಮುಖ್ಯಸ್ಥ (ಎಚ್‌ಒಜೆಡ್) ಅವರ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ. ತನಿಖೆ ಪರಿಣಾಮಕಾರಿಯಾಗಿ ನಡೆಯುವಂತೆ ನೋಡಿಕೊಳ್ಳಲು ಕೋಲ್ಕತ್ತಾ ವಲಯದ ಜಂಟಿ ನಿರ್ದೇಶಕರು ಅಗತ್ಯಕ್ಕೆ ಅನುಗುಣವಾಗಿ ಎಸ್‌ಐಟಿಯಲ್ಲಿ ಕೋಲ್ಕತ್ತಾ ವಲಯದ ಅಧಿಕಾರಿಗಳನ್ನು ಸೇರಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದಲ್ಲಿ ಮೂವರು ಶಾರ್ಪ್‌ಶೂಟರ್‌ಗಳನ್ನು ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆತಂದು ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ 13 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಥ ಅವರ ಮೇಲೆ ದಾಳಿ ನಡೆಸಿರುವವರು ಪಶ್ಚಿಮ ಬಂಗಾಳದಿಂದ ಹೊರಗಿನಿಂದ ಬಂದವರಾಗಿದ್ದಾರೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ಎಸ್ ಐಟಿ ಸದಸ್ಯರನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಚೆನ್ನೈಯಿಂದ ಅಬುಧಾಬಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ದುರಂತ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ಅನಂತರ ಅಂದರೆ ಮೇ 6 ರಂದು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಮಧ್ಯಮಗ್ರಾಮ್‌ನಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ಚಂದ್ರನಾಥ್ ರಥ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಚಂದ್ರನಾಥ್ ರಥ ಅವರ ವಾಹನವನ್ನು ಕಾರೊಂದು ಕ್ರಾಸಿಂಗ್‌ನಲ್ಲಿ ತಡೆದಿತ್ತು. ಈ ಘಟನೆಯಲ್ಲಿ ಚಂದ್ರನಾಥ್ ರಥ ಅವರ ಚಾಲಕ ಬುದ್ಧದೇಬ್ ಬೆರಾ ಅವರಿಗೂ ತೀವ್ರವಾದ ಗಾಯಗಳಾಗಿದ್ದು, ಅವರೀಗ ಚೇತರಿಸಿಕೊಂಡಿದ್ದಾರೆ.