ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರ ಸೊಸೆ ಆತ್ಮಹತ್ಯೆ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸಾವಿಗೆ ಶರಣು
Mamata Banerjee's Niece dies: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಮತಾ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಪುತ್ರಿ ಬ್ರಿಷ್ಟಿ ಮುಖರ್ಜಿ ಆತ್ಮಹತ್ಯೆ ಮಾಡಿಕೊಂಡವರು. ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಮೂಲಕ ಉದ್ಯೋಗ ಪಡೆದ ಆರೋಪವನ್ನು ಬ್ರಿಷ್ಟಿ ಮುಖರ್ಜಿ ಎದುರಿಸುತ್ತಿದ್ದರು.
ಆತ್ಮಹತ್ಯೆಗೆ ಶರಣಾದ ಮಮತಾ ಬ್ಯಾನರ್ಜಿಯ ಸೋದರ ಸೊಸೆ ಬ್ರಿಷ್ಟಿ ಮುಖರ್ಜಿ -
ಕೋಲ್ಕತಾ, ಸೆ. 1: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರ ಸೋದರ ಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿ ಬ್ರಿಷ್ಟಿ ಮುಖರ್ಜಿ ಆತ್ಮಹತ್ಯೆ (Self-harming) ಮಾಡಿಕೊಂಡಿದ್ದಾರೆ. ಅವರಿಗೆ 28 ವರ್ಷ ವಯಸ್ಸಾಗಿತ್ತು. ಪಶ್ಚಿಮ ಬಂಗಾಳದ (West Bengal) ಬಿರ್ಭುಮ್ ಜಿಲ್ಲೆಯ ಕುಸುಂಬಾ ಗ್ರಾಮದಲ್ಲಿರುವ ಅವರ ಮನೆಯ ಮೊದಲ ಮಹಡಿಯಲ್ಲಿ ಮಂಗಳವಾರ (ಸೆಪ್ಟೆಂಬರ್ 1) ಬೆಳಗ್ಗೆ 9 ಗಂಟೆ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಮೂಲಕ ಉದ್ಯೋಗ ಪಡೆದ ಆರೋಪವನ್ನು ಬ್ರಿಷ್ಟಿ ಮುಖರ್ಜಿ ಎದುರಿಸುತ್ತಿದ್ದರು. ಬ್ರಿಷ್ಟಿ ಮತ್ತು ಅವರ ಪತಿ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು. ಬ್ರಿಷ್ಟಿ ಕೆಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅದಕ್ಕಾಗಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎನ್ನಲಾಗಿದೆ. ಆಕೆಯ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ರಾಂಪುರ್ಹತ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಮತ್ತು ತನಿಖೆ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರನ್ನು ಕೊಂದ ಕೇಸ್‌ಗೆ ಟ್ವಿಸ್ಟ್; ಕೇರಳದ ಯುವತಿ ಅರೆಸ್ಟ್!
ಪೊಲೀಸ್ ನೋಟಿಸ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ
ಭಾರತದಾದ್ಯಂತ ಹಲವು ಸೈಬರ್ ವಂಚನೆ ಪ್ರಕರಣಗಳಲ್ಲಿ ತನ್ನ ಬ್ಯಾಂಕ್ ಖಾತೆಯನ್ನು ಬಳಸಲಾಗಿದೆ ಎಂದು ತಿಳಿದು ಆತಂಕಗೊಂಡ 38 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಮೃತರನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದೇವಿಕಾ ಆರ್ಮುಗಂ ಪಂಡಾರಂ ಎಂದು ಗುರುತಿಸಲಾಗಿದೆ.
ರಾಜಸ್ಥಾನದ ಚುರು ಸೈಬರ್ ಸೆಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆಗಸ್ಟ್ 8ರಂದು ಪಂಡಾರಂ ಅವರ ಮನೆಗೆ ಭೇಟಿ ನೀಡಿದ್ದರು. ಅವರ ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾತೆಯನ್ನು ಆನ್‌ಲೈನ್ ವಂಚನೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದರು.