ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʼʼಮಮತಾ ಬ್ಯಾನರ್ಜಿ ಬೆಂಗಾವಲು ಪಡೆ ಮೇಲಿನ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲʼʼ: ಪಶ್ಚಿಮ ಬಂಗಾಳ ಸಚಿವ ಅರ್ಜುನ ಸಿಂಗ್ ಸ್ಪಷ್ಟನೆ

Mamata Banerjee: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ಪಡೆಯ ವಾಹನದ ಮೇಲೆ ನಡೆದ ದಾಳಿ ಭಾರಿ ಸಂಚಲನ ಮೂಡಿಸಿದೆ. ಇದೀಗ ಈ ಬಗ್ಗೆ ಮಾತನಾಡಿದ ಬಿಜೆಪಿ ನಾಯಕರು, ತಮಗೂ ಈ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಶ್ಚಿಮ ಬಂಗಾಳ ಸಚಿವ ಅರ್ಜುನ್‌ ಸಿಂಗ್‌ (ಸಂಗ್ರಹ ಚಿತ್ರ)

ಕೋಲ್ಕತಾ, ಆ. 10: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್‌ 9) ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಆಡಳಿತರೂಢ ಪಕ್ಷ ಬಿಜೆಪಿ ಸ್ಪಷ್ಟಪಡಿಸಿದೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಅರ್ಜುನ ಸಿಂಗ್, ʼ‘ಈ ದಾಳಿಯಲ್ಲಿ ಬಿಜೆಪಿಯ ಕೈವಾಡವಿಲ್ಲ. ನಮ್ಮ ಪಕ್ಷ ಇಂತಹ ಕೃತ್ಯಗಳನ್ನ ಬೆಂಬಲಿಸುವುದಿಲ್ಲ. ಟಿಎಂಸಿ ಆಡಳಿತಾವಧಿಯಲ್ಲಿ ಯಾರ ಮನೆಗಳನ್ನ ದೋಚಿ, ಧ್ವಂಸಗೋಳಿಸಲಾಗಿತ್ತೋ ಆ ಜನರೇ ಈ ರೀತಿ ಮಾಡಿದ್ದಾರೆ. ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ನಮ್ಮ ಪಕ್ಷದವರೂ ಅಲ್ಲಿ ಇರಲಿಲ್ಲʼ’ ಎಂದು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಸಜಲ್ ಘೋಷ ಮಾತನಾಡಿ, ‘ʼನಮ್ಮ ಪಕ್ಷ ಇಂತಹ ದಾಳಿಗಳನ್ನು ಬೆಂಬಲಿಸುವುದಿಲ್ಲ. ಝಡ್‌ ಪ್ಲಸ್ ಭದ್ರತೆ ಹೊಂದಿರುವ ನಾಯಕಿ ತಾವು ಎಲ್ಲಿಗೆ ಹೋಗುತ್ತಿರುವುದಾಗಿ ಪೋಲಿಸರಿಗೆ ನೀಡಬೇಕಿತ್ತುʼʼ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಬೆಂಗಾವಲು ಪಡೆ ಮೇಲಿನ ದಾಳಿ ಬಗ್ಗೆ ಸಚಿವ ಸುಕಾಂತ ಮಜುಂದಾರ್ ಹೇಳಿಕೆ:



ʼʼಮಮತಾ ಬ್ಯಾನರ್ಜಿ ಅವರ ವಾಹನದ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆದ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಮಾಜಿ ಮುಖ್ಯಮಂತ್ರಿಯಾಗಿರಲಿ ಅಥವಾ ಯಾವುದೇ ನಾಯಕರ ಮೇಲಾಗಲೀ ನಡೆಯುವ ಇಂತಹ ಕೃತ್ಯಗಳನ್ನ ಬಿಜೆಪಿ ಖಂಡಿಸುತ್ತದೆʼʼ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಾಮಿಕ ಭಟ್ಟಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಈ ಘಟನೆಯನ್ನು ಖಂಡಿಸಿ, ʼʼಈ ಪ್ರತಿಭಟನೆಯು ಮಮತಾ ಬ್ಯಾನರ್ಜಿ ವಿರುದ್ಧದ ಸಾರ್ವಜನಿಕರ ಆಕ್ರೋಶವನ್ನ ಬಿಂಬಿಸುತ್ತಿದೆʼʼ ಎಂದು ಹೇಳಿದ್ದಾರೆ.

ಟಿಎಂಸಿ ಬಂಡಾಯ ನಾಯಕರಿಗೆ ಡೋಂಟ್‌ ಕೇರ್‌ ಎಂದ ಮಮತಾ ಬ್ಯಾನರ್ಜಿ ಮಮತಾ ಬ್ಯಾನರ್ಜಿ ಸಂದೇಶ

ಬಿಜೆಪಿ ಮೇಲೆ ಕೊಲೆ ಯತ್ನದ ಆರೋಪ ಹೊರೆಸಿದ ಟಿಎಂಸಿ

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ಪಡೆ ಮೇಲೆ ಭಾನುವಾರ ದಾಳಿ ನಡೆದಿತ್ತು ಎಂದು ಆರೋಪಿಸಲಾಗಿದೆ. ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬವನ್ನು ಬೇಟಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದವರು, ತಾವು ಯಾವುದೇ ಪಕ್ಷದ ಬೆಂಬಲಿತರಲ್ಲ, ಸ್ಥಳಿಯ ನಿವಾಸಿಗಳೆಂದು ಹೇಳಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅಧಿಕಾರದಲ್ಲಿದ್ದಾಗ ಈ ಪ್ರದೇಶಕ್ಕೆ ಎಂದು ಬೇಟಿ ನೀಡಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ ಅವರು ‘ʼವಾಪಸ್ ಹೋಗಿʼ’ ಹಾಗೂ ‘ʼಕಳ್ಳʼ’ ಎಂಬ ಘೋಷನೆಗಳನ್ನ ಕೂಗಿದ್ದಾರೆ.

ಕಾರಿನ ಮೇಲೆ ಗೂಂಡಾಗಳು ದಾಳಿ ಮಾಡಿದ್ದಾರೆಂದು ಮಮತಾ ಬ್ಯಾನರ್ಜಿ ಆರೋಪ

ದಾಳಿಯ ನಂತರ ಪ್ರತಿಕ್ರಿಯಿಸಿದ ಟಿಎಂಸಿ ಸಂಸದರಾದ ಕಲ್ಯಾಣ್‌ ಬ್ಯಾನರ್ಜಿ ಮತ್ತು ಡೋಲಾ ಸೆನ್, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ʼʼನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಲ್ಲಿ ಉಪಸ್ಥಿತರಿದ್ದರು. ಆದರೆ ಪೋಲಿಸರು ಯಾವುದೇ ಕ್ರಮ ಕೈಗೊಳ್ಳದೆ ಮೂಕಪ್ರೇಕ್ಷಕರಾಗಿ ನಿಂತಿದ್ದರುʼ’ ಎಂದು ಕಲ್ಯಾಣ್‌ ಬ್ಯಾನರ್ಜಿ ಕಿಡಿಕಾರಿದ್ದಾರೆ.

Ramesh Ballamoole

View all posts by this author