ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭಾರಿ ಭದ್ರತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯ 5 ಬೇಡಿಕೆಗಳೇನು?

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ಬೆಂಬಲಿಗರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಇರಿಸಿದ್ದಾರೆ. ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ದೊಡ್ಡ ಪ್ರಮಾಣದ ಯುವ ಸಮೂಹ ಪಾಲ್ಗೊಂಡಿದೆ.

ಕಾಕ್ರೋಚ್ ಜನತಾ ಪಕ್ಷದ 5 ದೊಡ್ಡ ಬೇಡಿಕೆಗಳು

ಸಂಗ್ರಹ ಚಿತ್ರ -

ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (Cockroach Janata Party) ಬೆಂಬಲಿಗರು ಐದು ಪ್ರಮುಖ ಬೇಡಿಕೆಗಳನ್ನು ಇರಿಸಿ ದೆಹಲಿಯ ದೆಹಲಿಯ (Delhi) ಜಂತರ್ ಮಂತರ್ (Jantar Mantar) ನಲ್ಲಿ ಶನಿವಾರ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Deepke) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಬೃಹತ್ ಪ್ರಮಾಣದ ಯುವ ಸಮೂಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ಐದು ಪ್ರಮುಖ ಬೇಡಿಕೆಗಳನ್ನು ಇರಿಸಿದೆ.

ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಶನಿವಾರ ಬೆಳಗ್ಗೆ ಅಮೆರಿಕದಿಂದ ಭಾರತಕ್ಕೆ ಮರಳಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವವನ್ನು ವಹಿಸಿದರು. ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಬಿಜೆಪಿ ತೊರೆದು ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ವ್ಯಾಪಕ ಜನ ಬೆಂಬಲ; ಕೇವಲ 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ

ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನದ ರೂಪವಾಗಿ ಕಳೆದ ತಿಂಗಳ ಮಧ್ಯಭಾಗದಲ್ಲಿ ಆರಂಭವಾದ ಕಾಕ್ರೋಚ್ ಜನತಾ ಪಕ್ಷವು ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಲೇ ಬಂದಿದೆ. ಆದರೆ ಇದಕ್ಕೆ ಬದಲಾಗಿ ಸಿಜೆಪಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಲು, ಪೋಸ್ಟ್‌ಗಳನ್ನು ಅಳಿಸಲು, ಖಾತೆಯನ್ನು ನಿಷೇಧಿಸಲಾಯಿತು. ಇದರಿಂದ ಸಿಜೆಪಿ ಹೋರಾಟ ಇದೀಗ ಬೀದಿಗೆ ಬಂದಿದೆ.

ಬೇಡಿಕೆಗಳೇನು?

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹೊರತು ಪಡಿಸಿ ಕಾಕ್ರೋಚ್ ಜನತಾ ಪಕ್ಷವು ಈ ಐದು ಬೇಡಿಕೆಗಳನ್ನು ಇರಿಸಿದೆ.

ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಶಕ್ತಿ ಪ್ರದರ್ಶನ

  1. ಇವತ್ತು ಎಲ್ಲಾ ಕ್ಷೇತ್ರವೂ ಡಿಜಿಟಲೀಕರಣವಾಗುತ್ತಿದೆ. ಇದರೊಂದಿಗೆ ವಂಚನೆಗಳು ಕೂಡ ಹೆಚ್ಚಾಗಿವೆ. ಹೀಗಾಗಿ ಶಿಕ್ಷಕರಿಗೆ ಸರಿಯಾದ ತರಬೇತಿ ನೀಡಿದ ಬಳಿಕವೇ ಶಿಕ್ಷಣದಲ್ಲಿ ಡಿಜಿಟಲೀಕರಣ ಮಾಡಬೇಕು.
  2. ಮಣಿಪುರದಲ್ಲಿ ಉಂಟಾಗಿರುವ ಅಶಾಂತಿಯ ಪರಿಣಾಮ ಅಲ್ಲಿನ ವಿದ್ಯಾರ್ಥಿಗಳು ತೊಂದರೆಯಲ್ಲಿದ್ದಾರೆ. ಅಲ್ಲಿನ ಯಾವುದೇ ಶಾಲೆ, ಕಾಲೇಜುಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಸಿಗುವಂತೆ ಮಾಡಬೇಕು.
  3. ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನ್ಯಾಯಯುತವಾಗಿ ಮತ್ತು ವಿಶ್ವಾಸಾರ್ಹವಾಗಿ ನಡೆಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಕುಂದಿಸುತ್ತದೆ.
  4. ವಿದ್ಯಾರ್ಥಿಯಾಗಿರಲಿ, ಪೋಷಕರಾಗಿರಲಿ ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಚಿಂತನೆ ಮಾಡಬೇಕು. ಇಲ್ಲಿನ ಸಮಸ್ಯೆಗಳ ಬಗ್ಗೆ ಎಲ್ಲರೂ ಯೋಚಿಸುವಂತಾಗಬೇಕು.
  5. ಪ್ರತಿ ವರ್ಷ ಹಲವಾರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಲಕ್ಷಾಂತರ ಜನರು ನಿರಂತರ ಒತ್ತಡವನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.