Goa Night Club Fire: ಗೋವಾ ನೈಟ್ ಕ್ಲಬ್ ಬೆಂಕಿ ದುರಂತಕ್ಕೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರಿ 23 ಮಂದಿ ಸಜೀವದಹನವಾಗಿದ್ದಾರೆ. ಬೆಂಕಿಯು ಮಧ್ಯರಾತ್ರಿಯ ನಂತರ ಸಿಲಿಂಡರ್ ಸ್ಫೋಟದಿಂದ ಉಂಟಾಗಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಫೋಟ ಸಂಭವಿಸುತ್ತಿದ್ದಂತೆ ದೊಡ್ಡ ಶಬ್ದ ಕೇಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ.
ಗೋವಾ ನೈಟ್ ಕ್ಲಬ್ ದುರಂತ -
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ (Goa Night Club Fire) ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರಿ 23 ಮಂದಿ ಸಜೀವದಹನವಾಗಿದ್ದಾರೆ. ಬೆಂಕಿಯು ಮಧ್ಯರಾತ್ರಿಯ ನಂತರ ಸಿಲಿಂಡರ್ ಸ್ಫೋಟದಿಂದ ಉಂಟಾಗಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಫೋಟ ಸಂಭವಿಸುತ್ತಿದ್ದಂತೆ ದೊಡ್ಡ ಶಬ್ದ ಕೇಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಗೆ ಹೋಗುವಾಗ ಸ್ಫೋಟದ ಶಬ್ದ ಕೇಳಿಸಿತು ಮತ್ತು ನಂತರ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸುತ್ತಿರುವುದನ್ನು ಕಂಡೆವು ಎಂದು ನಿವಾಸಿಯೊಬ್ಬರು ಹೇಳಿದ್ದಾರೆ. ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಬೆಂಕಿಯ ಜ್ವಾಲೆಗಳು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತ್ತು. ತಪ್ಪಿಸಿಕೊಳ್ಳಲು ಒಳಗಿರುವವರಿಗೆ ತುಂಬಾ ಕಡಿಮೆ ಸಮಯ ಇತ್ತು ಎನ್ನಲಾಗಿದೆ.
ದುರ್ಘಟನೆಗೆ ಪ್ರತಿಕ್ರಿಯೆ ನೀಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಘಟನೆ ಕುರಿತು ತನಿಖೆ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಗೋವಾದಲ್ಲಿ ಇಂದು ನಮಗೆಲ್ಲರಿಗೂ ಅತ್ಯಂತ ನೋವಿನ ದಿನ. ಅರ್ಪೋರಾದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವು 23 ಜನರನ್ನು ಬಲಿ ತೆಗೆದುಕೊಂಡಿದೆ. ಊಹಿಸಲಾಗದ ನಷ್ಟವಾಗಿದ್ದು, ಘಟನೆ ಕುರಿತು ತೀವ್ರವಾಗಿ ದುಃಖಿತನಾಗಿದ್ದೇನೆ. ಎಲ್ಲಾ ಮೃತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಸಿಲಿಂಡರ್ ಸ್ಫೋಟವು ಬೆಂಕಿಗೆ ಪ್ರಮುಖ ಕಾರಣ ಇನ್ನು ತಿಳಿದು ಬಂದಿಲ್ಲ. ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಕಟ್ಟಡ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ತನಿಖೆಯು ಪರಿಶೀಲಿಸುತ್ತದೆ. ತಪ್ಪಿತಸ್ಥರು ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
ಹಾಂಗ್ ಕಾಂಗ್‌ನಲ್ಲಿ ಭೀಕರ ಅಗ್ನಿ ದುರಂತ; 13 ಮಂದಿ ಸಾವು: 7 ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ
ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ
ಈ ದುರ್ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು PMO ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ.