Anmol Bishnoi: ಲಾರೆನ್ಸ್ ಬಿಷ್ಣೋಯ್ ಸಹೋದರನಿಗೆ ಬಿಗ್ ಶಾಕ್; ಅಮೆರಿಕದಿಂದ ಗ್ಯಾಂಗ್‌ಸ್ಟರ್ ಅನ್ಮೋಲ್ ಗಡಿಪಾರು
Lawrence bishnoi: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿಗಳಲ್ಲಿ ಒಬ್ಬನಾದ ಅನ್ಮೋಲ್ ಬಿಷ್ಣೋಯ್‌ನನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದ್ದು, ಇಂದು ದೆಹಲಿಗೆ ಕರೆತರಲಾಗುತ್ತದೆ. ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್.ಈತನ ಮೇಲೆ ಭಾರತದಲ್ಲಿ ಒಟ್ಟು 18 ಕ್ರಮಿನಲ್ ಕೇಸ್‌ಗಳಿವೆ.
ಅನ್ಮೋಲ್ ಬಿಷ್ಣೋಯ್ -
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿಗಳಲ್ಲಿ ಒಬ್ಬನಾದ ಅನ್ಮೋಲ್ ಬಿಷ್ಣೋಯ್‌ನನ್ನು ( Anmol Bishnoi) ಅಮೆರಿಕದಿಂದ ಗಡೀಪಾರು ಮಾಡಲಾಗಿದ್ದು, ಇಂದು ದೆಹಲಿಗೆ ಕರೆತರಲಾಗುತ್ತದೆ. ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಸಹೋದರನಾಗಿದ್ದು, ಎನ್‌ಸಿಪಿ ಮುಖ್ಯಸ್ಥ ಬಾಬಾ ಸಿದ್ಧಕಿ ಅವರ ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಭಾರತದಲ್ಲಿ ಕನಿಷ್ಠ 18 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಸಿಧು ಮೂಸೆವಾಲಾ ಕೊಲೆ ಮತ್ತು ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿಯ ಹಿಂದೆ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.
ಅನ್ಮೋಲ್ ಬಿಷ್ಣೋಯ್ ಯಾರು?
ಅನ್ಮೋಲ್ ಬಿಷ್ಣೋಯ್ ಗ್ಯಾಂಗ್‌ಸ್ಟರ್ ಲಾರೆನ್ಸ್ ಸಹೋದರ. ಆತ ಅಮೆರಿಕದಿಂದ ಭಾರತದಲ್ಲಿ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಮೂಸೆವಾಲಾ ಹತ್ಯೆಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕ್ಸ್ ಒದಗಿಸುವುದು ಸೇರಿದಂತೆ ಅನ್ಮೋಲ್ ವಿರುದ್ಧ ಹದಿನೆಂಟು ಪ್ರಕರಣಗಳು ದಾಖಲಾಗಿವೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದಾನೆ. 2024ರ ಅಕ್ಟೋಬರ್ 12ರಂದು ಬಾಬಾ ಸಿದ್ದಿಕಿಯನ್ನು ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅನ್ಮೋಲ್ ಕೂಡ ಶೂಟರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ.
2024ರಲ್ಲಿ ಆತನನ್ನು ಅಮೆರಿಕದಲ್ಲಿಯೂ ಬಂಧಿಸಲಾಯಿತು. ವರದಿಗಳ ಪ್ರಕಾರ, ಅಂದಿನಿಂದ ಅನ್ಮೋಲ್ ಅಮೆರಿಕದ ಪೊಲೀಸರು ಮತ್ತು ಏಜೆನ್ಸಿಗಳ ವಶದಲ್ಲಿದ್ದಾನೆ. ಬಿಷ್ಣೋಯ್ ಗ್ಯಾಂಗ್ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಸೇರಿದಂತೆ ಖಲಿಸ್ತಾನ್ ಪರ ಗುಂಪುಗಳೊಂದಿಗೆ ನಿಕಟ ಸಂಬಂಧ ಹೊಂದಿದೆ ಮತ್ತು ಅನ್ಮೋಲ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಕೂಡ ಆ ಕಾರ್ಯಾಚರಣೆಗಳನ್ನು ನಡೆಸುತ್ತಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Lawrence Bishnoi: ಬೆಂಗಳೂರಿನ ಉದ್ಯಮಿಗೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಬೆದರಿಕೆ
ಏಪ್ರಿಲ್ 2024 ರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಅನ್ಮೋಲ್ ಹೊತ್ತುಕೊಂಡಿದ್ದ , ನಂತರ ಮುಂಬೈ ಪೊಲೀಸರು ಅವನ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದರು. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯಲ್ಲಿ ಅನ್ಮೋಲ್ ಕೂಡ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಅನ್ಮೋಲ್ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದ, ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ, ಬೆದರಿಕೆಗಳನ್ನು ನೀಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ತಿಳಿದು ಬಂದಿದೆ.
ಪಂಜಾಬ್‌ನ ಫಜಿಲ್ಕಾ ಜಿಲ್ಲೆಯವನಾದ ಅನ್ಮೋಲ್, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕಾರ ಭಾರತದ 'ಮೋಸ್ಟ್ ವಾಂಟೆಡ್'ಗಳಲ್ಲಿ ಒಬ್ಬನಾಗಿದ್ದು, ಅವನಿಗೆ 10 ಲಕ್ಷ ರೂ.ಗಳ ಬಹುಮಾನವಿದೆ. ನಕಲಿ ಪಾಸ್‌ಪೋರ್ಟ್ ಬಳಸಿ ಭಾರತದಿಂದ ಪಲಾಯನ ಮಾಡಿದ ನಂತರ ಅನ್ಮೋಲ್ ತಲೆಮರೆಸಿಕೊಂಡಿದ್ದ ಎಂದು ವರದಿಯಾಗಿದೆ.