ಡಿಲಿಮಿಟೇಶನ್‌ನಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ; ಮೋದಿ ಹೇಳಿದ್ದೇನು?
Narendra Modi: ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡನೆ ಮಸೂದೆ-2026 ನಂತರ ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. "ಯಾವುದೇ ರಾಜ್ಯಕ್ಕೆ ತಾರತಮ್ಯ ಮಾಡುವುದಿಲ್ಲ" ಎಂದರು.
ನರೇಂದ್ರ ಮೋದಿ (ಸಂಗ್ರಹ ಚಿತ್ರ) -
Ramesh Ballamoole
Apr 16, 2026 3:47 PM
ದೆಹಲಿ, ಏ. 16: ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡನೆ ಮಸೂದೆ-2026 ನಂತರ ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. "ನಮ್ಮ ಸರ್ಕಾರ ಭಾರತವನ್ನು ಒಂದಾಗಿ ನೋಡುತ್ತದೆ. ಭಾಗಗಳಾಗಿ ಅಲ್ಲ. ಮಸೂದೆ ಯಾರಿಗೂ ಅನ್ಯಾಯ ಮಾಡುವುದಿಲ್ಲʼʼ ಎಂದು ಅವರು ಹೇಳಿದರು. "ಯಾವುದೇ ರಾಜ್ಯಕ್ಕೆ ತಾರತಮ್ಯ ಮಾಡುವುದಿಲ್ಲ" ಎಂದು ಪ್ರಧಾನಿ ಹೇಳುತ್ತಿದ್ದಂತೆ ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದರು.