ಯೋಗಿ ಅಲಹಾಬಾದ್ ಹೈಕೋರ್ಟ್‌ನ ಸಿಜೆಐನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ
ಯೋಗಿ ಅಲಹಾಬಾದ್ ಹೈಕೋರ್ಟ್‌ನ ಸಿಜೆಐನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ
![ಯೋಗಿ ಅಲಹಾಬಾದ್ ಹೈಕೋರ್ಟ್‌ನ ಸಿಜೆಐನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ](https://cdn-vishwavani-prod.hindverse.com/media/original_images/image-37404974-3b3e-404f-a1b6-66acba078e74.jpg)
![Profile](https://vishwavani.news/static/img/user.png)
![image-fa8b5a63-9b25-454f-8d9f-3d6e6ded1a42.jpg](https://cdn-vishwavani-prod.hindverse.com/media/images/image-fa8b5a63-9b25-454f-8d9f-3d6e6ded1a42.max-1200x800.jpg)
ಅಹಮದಾಬಾದ್: ಗುಜರಾತ್‌ನ ಕಚ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಒವೈಸಿ, c ಯೋಗಿ ಉತ್ತರ ಪ್ರದೇಶದಲ್ಲಿ ಯಾರನ್ನಾದರೂ ಗುರುತಿಸುತ್ತಾರೆ, ಅವರ ಮನೆಯನ್ನು ಹೊಡೆದು ಹಾಕಿಸುತ್ತಾರೆ ಎಂದು ಟೀಕೆ ಮಾಡಿದರು.
ಪ್ರಯಾಗ್‌ರಾಜ್‌ನಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿ ಎನ್ನಲಾದ ಜಾವೇದ್ ಮೊಹಮ್ಮದ್ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ವಾಗ್ದಾಳಿ ನಡೆಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಜೂ.10 ರಂದು ನಡೆದ ಹಿಂಸಾಚಾರದ ಸಂಚುಕೋರ ಎನ್ನಲಾದ ಜಾವೇದ್ ಮೊಹಮ್ಮದ್ ಮನೆಯನ್ನು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ ಭಾನುವಾರ ನೆಲಸಮಗೊಳಿಸಿತ್ತು ಈ ಹಿನ್ನೆಲೆ ಯಲ್ಲಿ ಒವೈಸಿ ಹೇಳಿದ್ದರು.
ಧ್ವಂಸಕ್ಕೆ ಬಂದ ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ. ಮನೆ ಕೆಡವಿರುವುದು ಕಾನೂನುಬಾಹಿರ ಎಂದು ಆರೋಪಿಸಿದರು. ಮನೆ ಜಾವೇದ್ ಮೊಹಮ್ಮದ್ ಅವರ ಪತ್ನಿ ಹೆಸರಲ್ಲಿದ್ದು, ಅಕ್ರಮ ನಿರ್ಮಾಣದ ಬಗ್ಗೆ ಯಾವುದೇ ನೋಟಿಸ್ ಅವರಿಗೆ ಬಂದಿಲ್ಲ ಎಂದು ವಕೀಲರು ತಿಳಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ಯಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು.
ಶನಿವಾರ ನಗರಸಭೆ ಆಡಳಿತದ ಅಧಿಕಾರಿಗಳು, ಪೊಲೀಸರೊಂದಿಗೆ ಸಹರನ್‌ಪುರದಲ್ಲಿ ಹಿಂಸಾಚಾರ ನಡೆಸಿದ ಇಬ್ಬರು ಆರೋಪಿ ಗಳ ಮನೆಗಳನ್ನು ಅವುಗಳು ಅಕ್ರಮ ನಿರ್ಮಾಣಗಳು ಎಂದು ನೆಲಸಮಗೊಳಿಸಿದ್ದರು. ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಸಮಾಜದ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಯೋಗಿ ಆದಿತ್ಯನಾಥ್ ನೀಡಿದ್ದಾರೆ.