Jyoti Malhotra: ಪಾಕಿಸ್ತಾನ ಪರ ಬೇಹುಗಾರಿಕೆ- ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಪೊಲೀಸ್ ಕಸ್ಟಡಿ 4 ದಿನಗಳವರೆಗೆ ವಿಸ್ತರಣೆ
ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕೆಯ ಮೇಲೆ ಬಂಧಿಸಲ್ಪಟ್ಟ 33 ವರ್ಷದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಅವಳ ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಅನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಉತ್ತರ ಭಾರತದಲ್ಲಿ ಪಾಕಿಸ್ತಾನಕ್ಕೆ ಸಂಬಂಧಿಸಿದ ಗೂಢಚಾರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದು, ಕಳೆದ ಎರಡು ವಾರಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ 12 ಜನರಲ್ಲಿ ಮಲ್ಹೋತ್ರಾ ಕೂಡ ಒಬ್ಬಳಾಗಿದ್ದಾಳೆ.


ಹಿಸಾರ್: ಪಾಕಿಸ್ತಾನದ (Pakistan) ಗುಪ್ತಚರ ಕಾರ್ಯಕರ್ತರಿಗೆ ಸೂಕ್ಷ್ಮ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಬಂಧಿತಳಾಗಿರುವ ಹರಿಯಾಣ (Haryana) ಮೂಲದ ಟ್ರಾವೆಲ್ ಯುಟ್ಯೂಬರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಅವಳಿಗೆ ಪೊಲೀಸ್ ಕಸ್ಟಡಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಲಾಗಿದೆ. ಟ್ರಾವೆಲ್ ವಿತ್ ಜೋ ( Travel with JO ) ಎನ್ನುವ ಟ್ರಾವೆಲ್ ಯುಟ್ಯೂಬ್ ಚಾನಲ್ ಹೊಂದಿರುವ ಜ್ಯೋತಿ ಹಲವು ತಿಂಗಳಿಂದ ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ನೀಡುತ್ತಿದ್ದ ಆರೋಪದಲ್ಲಿ ಮೇ 17ರಂದು ಬಂಧಿಸಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆಕೆಯ ಪೊಲೀಸ್ ಕಸ್ಟಡಿಯನ್ನು 4 ದಿನಗಳವರೆಗೆ ವಿಸ್ತರಿಸಿ ಆದೇಶಿಸಿದೆ.
ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕೆಯ ಮೇಲೆ ಬಂಧಿಸಲ್ಪಟ್ಟ 33 ವರ್ಷದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವಳ ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಅನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಉತ್ತರ ಭಾರತದಲ್ಲಿ ಪಾಕಿಸ್ತಾನಕ್ಕೆ ಸಂಬಂಧಿಸಿದ ಗೂಢಚಾರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದು, ಕಳೆದ ಎರಡು ವಾರಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ 12 ಜನರಲ್ಲಿ ಮಲ್ಹೋತ್ರಾ ಕೂಡ ಒಬ್ಬಳಾಗಿದ್ದಾಳೆ.
ಹಿಸಾರ್ ಮೂಲದ ಮಲ್ಹೋತ್ರಾ "ಟ್ರಾವೆಲ್ ವಿತ್ ಜೆಒ" ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದಳು. ಕಳೆದ ವಾರ ಆಕೆಯನ್ನು ನ್ಯೂ ಅಗರ್ಸೈನ್ ಎಕ್ಸ್ಟೆನ್ಶನ್‌ನಲ್ಲಿ ಬಂಧಿಸಲಾಗಿದ್ದು, ಆಕೆಯ ವಿರುದ್ಧ 1923ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3, 4 ಮತ್ತು 5 ಹಾಗೂ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಲ್ಹೋತ್ರಾಳಿಗೆ ಮಿಲಿಟರಿ ಅಥವಾ ರಕ್ಷಣಾ ಸಂಬಂಧಿತ ಯಾವುದೇ ಮಾಹಿತಿ ಲಭ್ಯವಿಲ್ಲ. ಆದರೆ ಅವರು ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರಲ್ಲಿ ಕೆಲವರೊಂದಿಗೆ ಸಂಪರ್ಕದಲ್ಲಿದ್ದರು.
ಕಮಿಷನ್ ಏಜೆಂಟ್‌ಗಳ ಮೂಲಕ ವೀಸಾ ಪಡೆದ ಅನಂತರ ಜ್ಯೋತಿ ಮಲ್ಹೋತ್ರಾ 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಬಳಿಕ ಹೊಸದಿಲ್ಲಿಯ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿ ಸದಸ್ಯ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್‌ನೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡಿದ್ದಳು. ಆಕೆಯನ್ನು ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳಿಗೆ ಪರಿಚಯಿಸಿದ್ದ ಡ್ಯಾನಿಶ್ ವಾಟ್ಸ್‌ಆ್ಯಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಎನ್‌ಕ್ರಿಪ್ಟ್ ಮಾಡಲಾದ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಕೆಯೊಂದಿಗೆ ನಿರಂತರ ಸಂವಹನ ನಡೆಸುತ್ತಿದ್ದ ಎನ್ನಲಾಗಿದೆ. ಗೂಢಚರ್ಯೆಯಲ್ಲಿ ಆರೋಪದ ಮೇಲೆ ಭಾರತ ಮೇ 13 ರಂದು ಡ್ಯಾನಿಶ್‌ರನ್ನು ದೇಶದಿಂದ ಹೊರಹಾಕಿದೆ ಎಂದು ಹಿಸಾರ್ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಲ್ಹೋತ್ರಾ ಅವಳ ಮೂರು ಮೊಬೈಲ್ ಫೋನ್, ಲ್ಯಾಪ್‌ಟಾಪ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೇ ಮಲ್ಹೋತ್ರಾ ಅವಳ ನಾಲ್ಕು ಬ್ಯಾಂಕ್ ಖಾತೆಗಳ ವಿಶ್ಲೇಷಣೆಯನ್ನು ಕೂಡ ನಡೆಸಲಾಗುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ, ಗುಪ್ತಚರ ಬ್ಯೂರೋ ಮತ್ತು ಮಿಲಿಟರಿ ಗುಪ್ತಚರ ಅಧಿಕಾರಿಗಳು ಈಗಾಗಲೇ ಮಲ್ಹೋತ್ರಾ ಅವಳನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Salman Khan: ಸಲ್ಮಾನ್ ಖಾನ್ ಜೀವಕ್ಕೆ ಅಪಾಯ; ಏಕಾ ಏಕಿ ನಟನ ಮನೆಗೆ ನುಗ್ಗಿದ ವ್ಯಕ್ತಿ !
ಜ್ಯೋತಿ ಮಲ್ಹೋತ್ರಾ ಈಗಾಗಲೇ ಪಾಕಿಸ್ತಾನ, ಚೀನಾ, ಬಾಂಗ್ಲಾದೇಶ ಸೇರಿದಂತೆ ಇತರ ಕೆಲವು ದೇಶಗಳಿಗೆ ಭೇಟಿ ನೀಡಿದ್ದಾಳೆ. ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರು ಮಲ್ಹೋತ್ರಾ ಅವಳನ್ನು ತಮ್ಮ ಆಸ್ತಿಯಾಗಿ ಬೆಳೆಸುತ್ತಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ನಾಲ್ಕು ದಿನಗಳ ಮಿಲಿಟರಿ ಸಂಘರ್ಷದ ಸಮಯದಲ್ಲಿ ಆಕೆ ಡ್ಯಾನಿಶ್ ಜೊತೆ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ.