ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Zubeen Garg: ಗಾಯಕ ಜುಬೀನ್‌ ಗರ್ಗ್‌ ಸಾವು ಪ್ರಕರಣ; ಮ್ಯಾನೇಜರ್‌ ಸೇರಿದಂತೆ ಇಬ್ಬರು ಅರೆಸ್ಟ್‌

Zubeen Garg's Manager arrested: ಸೆಪ್ಟೆಂಬರ್ 19 ರಂದು ಸಮುದ್ರದಲ್ಲಿ ಸ್ಕೂಬಾ ಡೈವಿಂಗ್‌ ವೇಳೆ ಮುಳುಗಿ ಜುಬೀನ್‌ ಸಾವಪ್ಪಿದ್ದರು. ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂ ಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ಎಸ್‌ಐಟಿಯನ್ನು ರಚಿಸಿದೆ.

ಗುವಾಹಟಿ: ಇತ್ತೀಚೆಗೆ ಸಿಂಗಾಪುರದಲ್ಲಿ ದುರಂತ ಸಾವನ್ನಪ್ಪಿದ್ದ ಖ್ಯಾತ ಗಾಯಕ ಜುಬೀನ್‌ ಗರ್ಗ್‌(Zubeen Garg) ಅವರ ಮ್ಯಾನೇಜರ್‌ ಹಾಗೂ ಕಾರ್ಯಕ್ರಮ ಆಯೋಜಕನನ್ನು ಇಂದು ಅರೆಸ್ಟ್‌ ಆಗಿದ್ದಾರೆ. ಜುಬೀನ್‌ ಸಾವಿಗೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವ (ಎನ್‌ಇಐಎಫ್) ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ ಮತ್ತು ಜುಬೀನ್ ಗಾರ್ಗ್ ಅವರ ಮ್ಯಾನೇ ಸಿದ್ಧಾರ್ಥ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಿಂಗಾಪುರದಿಂದ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಾಂತ ಆಗಮಿಸಿದಾಗ ಅವರನ್ನು ಬಂಧಿಸಲಾಯಿತು ಮತ್ತು ಗುರುಗ್ರಾಮ್‌ನ ಅಪಾರ್ಟ್‌ಮೆಂಟ್‌ನಿಂದ ಶರ್ಮಾ ಅವರನ್ನು ಬಂಧಿಸಲಾಯಿತು. ಬುಧವಾರ ಮುಂಜಾನೆ ಇಬ್ಬರನ್ನೂ ಗುವಾಹಟಿಗೆ ಕರೆತರಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Singer Zubeen Garg: ಲಿಮ್ಕಾ ರೆಕಾರ್ಡ್‌ಗೆ ಸೇರ್ಪಡೆಯಾಯಿತು ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ

ಸೆಪ್ಟೆಂಬರ್ 19 ರಂದು ಸಮುದ್ರದಲ್ಲಿ ಸ್ಕೂಬಾ ಡೈವಿಂಗ್‌ ವೇಳೆ ಮುಳುಗಿ ಜುಬೀನ್‌ ಸಾವಪ್ಪಿದ್ದರು. ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂ ಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ಎಸ್‌ಐಟಿಯನ್ನು ರಚಿಸಿತ್ತು. ಮಹಾಂತ, ಶರ್ಮಾ ಮತ್ತು ಸಿಂಗಾಪುರ್ ಅಸ್ಸಾಂ ಅಸೋಸಿಯೇಷನ್‌ನ ಸದಸ್ಯರು ಮತ್ತು ಉತ್ಸವಕ್ಕಾಗಿ ಸಿಂಗಾಪುರಕ್ಕೆ ಹೋಗಿದ್ದವರು ಸೇರಿದಂತೆ ಹಲವಾರು ಜನರಿಗೆ ಎಸ್‌ಐಟಿ ನೋಟಿಸ್ ನೀಡಿದೆ. ಮಹಾಂತ ಮತ್ತು ಶರ್ಮಾ ವಿರುದ್ಧ ಇಂಟರ್‌ಪೋಲ್ ಮೂಲಕ 'ಲುಕ್‌ಔಟ್ ನೋಟಿಸ್' ಹೊರಡಿಸಲಾಗಿದ್ದು, ಅಕ್ಟೋಬರ್ 6 ರೊಳಗೆ ಸಿಐಡಿ ಮುಂದೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

1972ರಲ್ಲಿ ಜನಿಸಿದ ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ತಮ್ಮ ಹೆಸರನ್ನು ಅಚ್ಚಳಿಯಂತೆ ಮಾಡಿದ್ದಾರೆ. ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾಗ ಜುಬೀನ್ ಗಾರ್ಗ್ ಅವರು ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದರು. ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

ಈ ಸುದ್ದಿಯನ್ನೂ ಓದಿ: Singer Zubeen Garg: ಖ್ಯಾತ ಗಾಯಕ ಜುಬೀನ್ ಗರ್ಗ್ ಸ್ಮಾರಕ ನಿರ್ಮಾಣಕ್ಕೆ ನಿರ್ಧಾರ

ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.