Wednesday, 28th July 2021

ಮತ ಎಣಿಕೆ ಕೇಂದ್ರಕ್ಕೆ ತೆರಳಲು ನಿಮ್ಮ ಬಳಿ ಇರಲಿ ನೆಗೆಟಿವ್ ವರದಿ

ರಾಯಚೂರು : ಮೇ. 2 ಕ್ಕೆ ಮಸ್ಕಿ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಮೇ. 2 ರಂದು ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಕೇಂದ್ರ ಚುನಾವಣಾ ಆಯೋಗವೂ ಸಹ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆಗೆಗೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕಾಲ ಜನತಾ ಕರ್ಪ್ಯೂ ವಿಧಿಸಿದೆ.

Leave a Reply

Your email address will not be published. Required fields are marked *