Tuesday, 9th August 2022

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಇಂದಿನಿಂದ ಆರಂಭ

ಬಳ್ಳಾರಿ: ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಭಾನುವಾರದಿಂದ ಆರಂಭವಾಗಿದೆ. ಈ ಮೂಲಕ ಬಳ್ಳಾರಿಯಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸಾರಿಗೆ ಇಲಾಖೆ ಸ್ಪಂದಿಸಿದೆ.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ನೂತನ ಬಸ್‍ಗೆ ಹಸಿರು ನಿಶಾನೆ ತೋರಿಸಿದರು. ಬಳ್ಳಾರಿ ಯಿಂದ ಬೆಳಗ್ಗೆ ಹೊರಡಲಿರುವ ಬಸ್ ಸವದತ್ತಿಗೆ ಮಧ್ಯಾಹ್ನ 2ಕ್ಕೆ ತಲುಪಲಿದೆ. ಸವದತ್ತಿಯಿಂದ ಮಧ್ಯಾಹ್ನ 2.30ಕ್ಕೆ ಬಳ್ಳಾರಿಗೆ ಈ ಬಸ್ ಹೊರಡಲಿದೆ. ಪ್ರಯಾಣ ದರ 263 ರೂ. ಇದೆ. ಬಳ್ಳಾರಿಯಿಂದ ಹೊಸಪೇಟೆ, ಕೊಪ್ಪಳ, ಗದಗ, ನವಲಗುಂದ, ಯಲ್ಲಮ್ಮನ ಗುಡ್ಡದ ಮಾರ್ಗವಾಗಿ ಸವದತ್ತಿಗೆ ತೆರಳಲಿದೆ.

ಬಳ್ಳಾರಿಯಿಂದ ತಿರುಪತಿ, ಶ್ರೀಶೈಲ, ಧರ್ಮಸ್ಥಳ, ಮಂತ್ರಾಲಯ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಬಸ್ ಸೇವೆ ಆರಂಭಿಸಲಾಗಿದೆ ಎಂದರು.

ಶ್ರೀನಿವಾಸ್‍ಮೂರ್ತಿ ನೇತೃತ್ವದ ಉನ್ನತ ಸಮಿತಿ ವರದಿ ನೀಡಿದ್ದು, ವರದಿಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವುದರ ಮೂಲಕ ಇಲಾಖೆ ಯನ್ನು ಲಾಭದಾಯಕವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.

1 ಲಕ್ಷ ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿ ಗಳು ಕೈಗೊಂಡಿದ್ದು, ಅದನ್ನು ಅನುಷ್ಠಾನಗೊಳಿಸಲಾಗುವುದು.

ನಮ್ಮ ಇಲಾಖೆಯಲ್ಲಿ ಸುಮಾರು 40 ಸಾವಿರ ಹಳೆಯ ಬಸ್‍ಗಳಿವೆ. ಮುಂದಿನ ದಿನಗಳಲ್ಲಿ ಎಲ್ಲ ಬಸ್‍ಗಳನ್ನು ಸಿಎನ್‍ಜಿ ಬಸ್‍ಗಳನ್ನಾಗಿ ಮಾಡಲಾಗು ವುದು ಎಂದು ಸಚಿವರು ಮಾಹಿತಿ ನೀಡಿದರು.