Friday, 27th May 2022

ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ರದ್ದಾಗುವುದೋ? ನಾಳೆ ನಿರ್ಧಾರ

NIght Curfew

ಬೆಂಗಳೂರು: ರಾಜ್ಯ ಸರ್ಕಾರ ಕರೋನಾ ನಿಯಂತ್ರಣಕ್ಕಾಗಿ ಜಾರಿಗೆ ತಂದ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಆದೇಶಕ್ಕೆ ಬಿಜೆಪಿಯ ಅನೇಕ ಶಾಸಕರು, ಸಚಿವರು, ಕೇಂದ್ರ ಸಚಿವರು ಆಕ್ಷೇಪ ವ್ಯಕ್ತ ಪಡಿಸಿದ್ದರು.

ಈ ಹಿನ್ನಲೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆ ಕರೆಯಲಾಗಿದೆ.  ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಾಸ್ ನಿರ್ಧರವನ್ನು ಸಿಎಂ ಬೊಮ್ಮಾಯಿ ಪ್ರಕಟಿಸಲಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದೆ. ಈ ವಾರ ಜಾರಿಯಾದರೆ ಮೂರನೇ ವಾರದ ವೀಕೆಂಡ್ ಕರ್ಪ್ಯೂ ನಡೆಯಲಿದೆ. ವೀಕೆಂಡ್ ಕರ್ಪ್ಯೂ ಬಗ್ಗೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಜೊತೆಗೆ ಶಾಸಕರು, ಸಚಿವರು, ಕೇಂದ್ರ ಸಚಿವರು ಕೂಡ ಆಕ್ಷೇಪಿಸಿದ್ದರು.

ಈ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವರು ಸೇರಿದಂತೆ ಅನೇಕ ತಜ್ಞರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರೆಸೋ, ರದ್ದು ಪಡಿಸೋ ಬಗ್ಗೆ ತೀರ್ಮಾನವನ್ನು ಕೂಡ ಕೈಗೊಳ್ಳಲಾಗುತ್ತದೆ.