Wednesday, 28th July 2021

ಎರಡು ವರ್ಷ ನಾನೇ ಸಿಎಂ, ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ

ಹಾಸನ: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿ ಯುತ್ತಾರೆ ಎಂದು ಹೇಳಿದ್ದಾರೆ.

“ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ” ಎಂದಿದ್ದಾರೆ.

“ನನ್ನ ಮೇಲೆ ಪ್ರಧಾನಿ, ಅಮಿತ್ ಶಾ ಅವರು ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ” ಎಂದು ಈ ಗೊಂದಲ ಮತ್ತೆ ಉದ್ಭವಿಸದು ಎಂದಿದ್ದಾರೆ.

Leave a Reply

Your email address will not be published. Required fields are marked *