Friday, 7th October 2022

ಭಾರತ್ ಬಂದ್ ಗೆ ಮೂರು ಕಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾವೇರಿ, ರಾಮನಗರ ಹಾಗೂ ದಾವಣಗೆರೆಯಲ್ಲಿ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದೆ.

ರಾಮನಗರದಲ್ಲಿ ವಾಹನ‌ ಸಂಚಾರ ಎಂದಿನಂತಿದ್ದು. ಎಪಿಎಂಸಿ ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಣೆ ನಡೆಸುತ್ತಿದೆ. ಅಲ್ಲಲ್ಲಿ ರೈತರ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ದಾವಣಗೆರೆಯಲ್ಲಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಸಿಪಿಐ ಇತರೆ ಸಂಘಟನೆ ಕಾರ್ಯಕರ್ತರು ಅಲ್ಲಲ್ಲಿ ಪ್ರತಿಭಟನೆ ನಡೆಸಿ ದರು. ಜನ ಜೀವನ ಎಂದಿನಂತೆ ಸಾಮಾನ್ಯವಾಗಿತ್ತು.

ಹಾವೇರಿಯಲ್ಲಿ ಜಿಲ್ಲೆಯಲ್ಲಿ ಅಟೋ, ಬಸ್ ಸಂಚಾರ ನಡೆಸುತ್ತಿದ್ದು, ಅಂಗಡಿ ಹೋಟೆಲ್‌ಗಳು ತೆರೆದಿವೆ. 11 ಗಂಟೆಯ ನಂತರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.