Wednesday, 1st December 2021

ಈ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಕೂಡದು: ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬಾರದು ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ ಅವರು, ಇಷ್ಟೊಂದು ಮಹತ್ವದ ನೀತಿ‌ ಸಂಸತ್, ದೇಶದ ಯಾವುದೇ ರಾಜ್ಯದ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಚರ್ಚೆಯೇ ಆಗಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಈ ವರ್ಷ ಎನ್‌ಇಪಿ ಜಾರಿಯಾಗಬಾರದು ಎಂದು ಹೇಳಿದ್ದಾರೆ.

ದೇಶದ 130 ಕೋಟಿ ಜನರ ಭವಿಷ್ಯದ ಪ್ರಶ್ನೆಯಾಗಿದೆ. ದೇಶದ ಬಹು ಸಂಸ್ಕ್ರತಿಯನ್ನು ಗಮನ ದಲ್ಲಿಟ್ಟುಕೊಂಡು ನೀತಿ ಜಾರಿಗೊಳಿಸಬೇಕು. ಇದು ಶಿಕ್ಷಣ ಕ್ಷೇತ್ರದ ಖಾಸಗೀಕರಣದ ಮೊದಲ ಹೆಜ್ಜೆ ಯಾಗಿದೆ.

ನೋಟು ಜಿಎಸ್ಟಿ, ರೈಲ್ವೆ, ಅಮಾನ್ಯೀಕರಣ, ಟೆಲಿಕಾಂ ವಿಷಯದಲ್ಲಿ ಆದಂತೆ ಎನ್‌ಇಪಿ ವಿಷಯದಲ್ಲೂ ಪ್ರಧಾನಿ ಮೋದಿ ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎಂದರು.