Monday, 26th October 2020

ಶಾಲೆ-ಕಾಲೇಜು ಪ್ರಾರಂಭ ಸದ್ಯಕ್ಕಿಲ್ಲ: ಸುರೇಶ್ ಕುಮಾರ್‌

ಬೆಂಗಳೂರು : ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿ ಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತ ವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶಾಲಾ-ಕಾಲೇಜು ಆರಂಭಿಸುವ ಸಂಬಂಧ ಯಾವುದೇ ಸಮಿತಿ ಸರ್ಕಾರದಿಂದ ರಚಿಸಲಾಗಿಲ್ಲ. ಆದರೆ, ಮಕ್ಕಳಿಗೆ ಗೊಂದಲವಿದ್ದರೆ ಪರಿಹರಿಸಿಕೊಳ್ಳಲು ಅವಕಾಶವಿದೆ ಎಂದು ಸಚಿವರು ಹೇಳಿದರು.

Leave a Reply

Your email address will not be published. Required fields are marked *