Saturday, 20th August 2022

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು: NSUI ಎಂ. ಡಿ. ಶ್ರೀಕಾಂತ್ ಯಾದವ್ ಅಗ್ರಹ

ಹರಪನಹಳ್ಳಿ: ರಾಜ್ಯದ ಎಲ್ಲಾ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಬಸ್ ಪಾಸ್ ನೀಡುವಂತೆ NSUI ಬಳ್ಳಾರಿ ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲಾ ಉಪಾಧ್ಯಕ್ಷರು ಎಂ.ಡಿ.ಶ್ರೀಕಾಂತ್ ಯಾದವ್ ಆಗ್ರಹಿಸಿ ದ್ದಾರೆ.

ಕಾಂಗ್ರೆಸ್ ನೇತೃತ್ವದಲ್ಲಿ ಸಿದ್ದರಾಮಯ್ಯ ರವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೊನೆಯ ಬಜೆಟ್ ನಲ್ಲಿ ಎಲ್ಲಾ ವರ್ಗದ ವಿಧ್ಯಾರ್ಥಿ ಗಳಿಗೂ ಉಚಿತ ಬಸ್ ಪಾಸ್ ಯೋಜನೆ ಘೋಷಣೆ ಮಾಡಿದ್ದರು, ಆದರೆ ನಂತರದಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತಹ ಮಹತ್ತರ ಯೋಜನೆಯನ್ನು ಅನುಷ್ಠಾನ ಮಾಡುತ್ತಿಲ್ಲ ಎಂದು ಅಕ್ರೋಶ ವ್ಯಕ್ತ ಪಡಿಸಿದರು.

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಮಹತ್ತರ ವಾದ ಉಚಿತ ಬಸ್ ಪಾಸ್ ಯೋಜನೆಯನ್ನು ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಬೇಕು ಎಲ್ಲಾ ವರ್ಗದ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಲಭ್ಯವಾಗು ವಂತೆ ಮಾಡಬೇಕು ಎಂದು ಅಗ್ರಸಿದರು.

ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳು ಆರ್ಥಿಕ ಹೊರೆಯ ಕಾರಣ ಕ್ಕಾಗಿ ಶಾಲಾ ಕಾಲೇಜು ಅಧ್ಯಯನದ ಮುಂದುವರಿಸಲು ಸಾಧ್ಯವಾಗದೆ ಶಿಕ್ಷಣದಿಂದ ವಂಚಿತರಾಗುವ ಸಾದ್ಯತೆ ಇದೆ ಆದ್ದರಿಂದ ಆರ್ಥಿಕ ಹೊರೆಯ ಕಾರಣಕ್ಕೆ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎಂದು ತಿಳಿಸಿದ್ದಾರೆ,

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಘೋಷಣೆ ಮಾಡಿದ ಯೋಜನೆ ಅನುಷ್ಠಾನವನ್ನು ವಿಳಂಬ ಮಾಡಿದಲ್ಲಿ NSUI ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು NSUI ಬಳ್ಳಾರಿ ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲಾ ಉಪಾಧ್ಯಕ್ಷರು ಎಂಡಿ ಶ್ರೀಕಾಂತ್ ಯಾದವ್ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.