Wednesday, 28th July 2021

ಬೆಳಗಾವಿಯಲ್ಲಿ ಒಂದು ದಿನ ಸಂಪೂರ್ಣ ಲಾಕ್’ಡೌನ್ ?

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೂನ್ 4 ರ ಬೆಳಿಗ್ಗೆ 6 ಗಂಟೆಯಿಂದ ಜೂ.7ರ ಬೆಳಿಗ್ಗೆ6 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿ ಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮತ್ತು ಹಾಲು ಖರೀದಿಗೆ ಆದೇಶ ಅನ್ವಯಿಸುವುದಿಲ್ಲ. ಆನ್ ಲೈನ್ ಫುಡ್ ಪಾರ್ಸಲ್ ಗಳಿಗೆ, ಕಚೇರಿಗಳಿಗೆ ಕೆಲಸಕ್ಕೆ ಹೋಗುವವರಿಗೆ ಅವಕಾಶ ಕಲ್ಪಿಸಲಾಗಿದೆ.

ರೈತ ಸಂಪರ್ಕ ಕೇಂದ್ರಕ್ಕೆ ಬರುವ ರೈತರು ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದಿರ ಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *