Thursday, 1st December 2022

ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಉತ್ತರ ಕನ್ನಡ: ಕಾರವಾರದ ಸಿದ್ಧಾಪುರ ತಾಲೂಕಿನ ಶಿರೂರು ಬಳಿ ಮದುವೆ ಗಾಗಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮತ್ತು ಮತ್ತೊಂದು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರುಗಳ ಮುಖಾಮುಖಿ ಡಿಕ್ಕಿಯಿಂದಾಗಿ ಓರ್ವ ಮೃತಪಟ್ಟು, 8 ಮಂದಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಸಿದ್ಧಾಪುರ ತಾಲೂಕಿನ ನಿಲ್ಕುಂದ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಂಜುನಾಥ್ ಬಿ ಗೌಡ ಎಂಬುವರೇ ಈ ಅಪಘಾತ ದಲ್ಲಿ ಮೃತಪಟ್ಟವರಾಗಿದ್ದಾರೆ. ಮದುವೆ ಮುಗಿಸಿ, ದಿಬ್ಬಣದ ಜನರನ್ನು ವಾಪಾಸ್ ಊರಿಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಿದ್ಧಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.