ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಇಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಬಳ್ಳಾರಿ ಬಂದ್ ಆಚರಣೆ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿಎಸ್ ವೈ ಭಾವಚಿತ್ರ ದಹನ ಮಾಡೋ ಮುಖೇನ ಆಕ್ರೋಶ ವ್ಯಕ್ತಪಡಿಸಿತು.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಇಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಹತ್ತಾರು ಮುಖಂಡರು ಬೆಳಿಗ್ಗೆ ಟೈರ್ ಗೆ ಬೆಂಕಿ ಹಚ್ಚುವ ಮೂಲಕ ಸಿಎಂ ಬಿಎಸ್ ವೈ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಭಾವಚಿತ್ರ ದಹನ ಮಾಡಿ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.