Thursday, 19th May 2022

ನಾಳಿನ ಭಾರತ ಬಂದ್‌ಗೆ ವಿಪಕ್ಷಗಳ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳ ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆ ವಿರುದ್ಧ ಅನ್ನದಾತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ನಮಗೆ ಬದುಕಲು ಬಿಡಿ ಎಂದು ಕಣ್ಣೀರಿಡುತ್ತಾ ರೈತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೂ ಪ್ರಧಾನಿ ಮೋದಿ ಈವರೆಗೂ ರೈತರನ್ನು ಭೇಟಿಯಾಗಿ ಚರ್ಚೆ ನಡೆಸಿಲ್ಲ. ಕೇಂದ್ರ ಸರ್ಕಾರ ರೈತರನ್ನು ಕೊಲೆ ಮಾಡುತ್ತಿದೆ. ನಾಳೆ ನಡೆಸುತ್ತಿರುವ ಭಾರತ್ ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.

ಈ ನಡುವೆ ಜೆಡಿಎಸ್ ಕೂಡ ಭಾರತ್ ಬಂದ್ ಗೆ ಬೆಂಬಲಿಸಿದೆ. ರೈತರ ಹಿತದೃಷ್ಟಿಯಿಂದ ನಡೆಸುವ ಯಾವುದೇ ಹೋರಾಟಕ್ಕೂ ನಮ್ಮ ಬೆಂಬಲವಿರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.