ಮರಳು ಸಾಗಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ನೂರಾರು ಬಿಜೆಪಿ ಕಾರ್ಯರ್ತರೊಂದಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿಿ ದಾಂಧಲೆ ಮಾಡಿದ ಹಾಗೂ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶಾಸಕ ಸಿ.ಟಿ.ರವಿ ಹಾಗೂ ಬೆಂಬಲಿಗರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಾಗೂ ಅಧೀನ ನ್ಯಾಾಯಾಲಯ ನಡೆಸುತ್ತಿಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಬಿಜೆಪಿ ಶಾಸಕ ಸಿ.ಟಿ. ರವಿ ಮತ್ತಿಿತರರು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ನ್ಯಾಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ ಸೂಕ್ತ ಸಾಕ್ಷ್ಯಾಾಧಾರಗಳ ಕೊರತೆ ಹಿನ್ನೆೆಲೆಯಲ್ಲಿ ಎಫ್ಐಆರ್ ರದ್ದುಪಡಿಸಿ ಅರ್ಜಿ ಇತ್ಯರ್ಥಪಡಿಸಿತು.