Tuesday, 27th July 2021

ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರ

ಮಂಗಳೂರು : ಯೋಗ ಮಾಡುತ್ತಿದ್ದ ಸಂದರ್ಭದಲ್ಲಿ ಬಿದ್ದು ತಲೆಗೆ ಏಟಾಗಿ, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ.

ಅವರ ಕೈ ಮತ್ತು ಕಾಲುಗಳಲ್ಲಿ ಚಲನೆಯೊಂದಿಗೆ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದು ಫರ್ನಾಂಡಿಸ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಉಡುಪಿ ಮತ್ತು ಮಣಿಪಾಲದ ತಜ್ಞ ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇಡಲಾಗಿದೆ.

80 ವರ್ಷದ ಹಿರಿಯ ನಾಯಕ ತಮ್ಮ ನಿವಾಸದಲ್ಲಿ ಯೋಗ ಮಾಡುವಾಗ ತಲೆಗೆ ಗಾಯವಾಗಿದೆ. ಅವರು ಡಯಾಲಿಸಿಸ್ ಗಾಗಿ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *