Saturday, 14th December 2024

ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಮಂದಿ ಸಾವು

ಬಸ್ತಾರ್: ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಜನರು ಮೃತಪಟ್ಟಿದ್ದಾರೆ.
ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ ಎಂದು ಹೇಳಲಾಗಿದೆ. ಜಿಲ್ಲೆಯ ಪ್ರಧಾನ ಕಛೇರಿ ಜಗದಲ್ಪುರದಿಂದ ಸುಮಾರು 12 ಕಿಮೀ ದೂರದಲ್ಲಿರುವ ನಗರನಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲ್ಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಣಿಯಲ್ಲಿ ಮಣ್ಣನ್ನು ಅಗೆಯುತ್ತಿದ್ದಾಗ ಅದರ ಒಂದು ಭಾಗ ಕುಸಿದು ಬಿದ್ದಿದೆ, ಇದ ರಿಂದಾಗಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಹೇಳಿದ್ದಾರೆ. ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿ ದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.