Thursday, 12th December 2024

ಕಾಮನ್ ಸೆನ್ಸ್ ಜತೆಗೆ ಜನರಲ್ ನಾಲೇಡ್ಜೂ ಇರಬೇಕು: ಪಾಟೀಲ

ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿ.ಸಿ.ಪಾಟೀಲ್ ಟಾಂಗ್

– ಅವರ ಅಧಿನಾಯಕಿ ಸೋನಿಯಾಗಾಂಧಿಯವರ ದೇಶದಲ್ಲೇ ಕರೊನಾ ಕೇಸ್ ಹೆಚ್ಚು

– ಸಚಿವರ ಕಾರ್ಯಕ್ರಮದಲ್ಲಿ ಪಾಲನೆಯಾಗದ ಸಾಮಾಜಿಕ ಅಂತರ

ಕೊಪ್ಪಳ:
ಕರೊನಾ ಬಗ್ಗೆ ತಿಳಿದುಕೊಳ್ಳಲು ಬರೀ ಕಾಮನ್ ಸೆನ್ಸ್ ಇದ್ದರೆ ಸಾಲದು, ಜೊತೆಗೆ ಜನರಲ್ ನಾಲೆಡ್ಜೂ ಇರಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದ ಕಿಮ್ಸ್‌ನಲ್ಲಿ ಶುಕ್ರವಾರ ಕೋವಿಡ್-೧೯ ಲ್ಯಾಬೋರೇಟರಿ ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಕರೊನಾ ಮಾಹಿತಿಗಾಗಿ ಪಿಎಚ್‌ಡಿನೇ ಮಾಡಬೇಕೆಂದಿಲ್ಲ, ಕಾಮನ್ ಸೆನ್ಸ್ ಸಾಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಪಾಟೀಲ ಟಾಂಗ್ ನೀಡಿದರು.

ಇಡೀ ಜಗತ್ತಿನಲ್ಲಿ ಕರೊನಾ ಕೇಸ್‌ಗಳು ಹೆಚ್ಚಾಗುತ್ತಿರುವುದು ಸಿದ್ದರಾಮಯ್ಯ ಅವರ ಅಧಿನಾಯಕಿ ಸೋನಿಯಾ ಗಾಂಧಿ ಅವರ ಇಟಲಿ ದೇಶದಲ್ಲಿ. ಅತ್ಯಂತ ಕಡಿಮೆ ಕೊರೊನಾ ಕೇಸ್‌ಗಳು ಪತ್ತೆಯಾಗುತ್ತಿರುವ ಬೃಹತ್ ಜನಸಂಖ್ಯೆ ಹೊಂದಿರುವ ಭಾರತದಲ್ಲಿ‌ ಅದರಲ್ಲಿ ಕರ್ನಾಟಕದಲ್ಲಿ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೊನಾ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ ಎಂದರು.

ಪ್ರಾಯೋಗಿಕವಾಗಿ ೫೫ ಸ್ಯಾಂಪಲ್ ಪರೀಕ್ಷೆಯನ್ನು ಮಾಡಲಾಗಿದೆ. ೫೫ ಸ್ಯಾಂಪಲ್ ಟೆಸ್ಟ್ ನೆಗೆಟಿವ್ ಬಂದಿದೆ. ಈಗ ಕೋವಿಡ್ ಟೆಸ್ಟ್ ಇಲ್ಲಿಯೇ ನಡೆಯುತ್ತದೆ. ಬಳ್ಳಾರಿ, ಬೆಂಗಳೂರು ಟೆಸ್ಟ್ ಕಳುಹಿಸಲಾಗುತ್ತಿತ್ತು.
ಈ ಸಮಸ್ಯೆಯನ್ನು ಬಗೆಹರಿಸಲು ಇಲ್ಲಿ ಲ್ಯಾಬ್ ಮಾಡಲಾಗಿದೆ ಎಂದರು.

ಸ್ಥಳೀಯ ಶಾಸಕರಿಗೆ ಇವತ್ತಿನ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಕೋಆರ್ಡಿನೇಷನ್ ಕೊರತೆ ಇಲ್ಲ ಎಂದ ಅವರು, ಜಿಲ್ಲೆಯಲ್ಲಿ ಅಕ್ರಮ ಮರಳು ನಡೆಯುತ್ತಿರುವ ಆರೋಪಕ್ಕೆ ಪ್ರತಿಕ್ರಿಯೆ
ಅಕ್ರಮ ಮರಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ.
ಎಲ್ಲಾದರೂ ನಡೆಯುತ್ತಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲಿ ಮರಳು ಪಾಯಿಂಟ್‌ಗಳು ಇವೆ ಎಂಬುದನ್ನು ಚೆಕ್ ಮಾಡಲಾಗುವುದು.
ತಮ್ಮ ಹಿಂಬಾಲಕರೆ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ಮಾಹಿತಿ ಇಲ್ಲ ಅದರ ಕುರಿತು ಪರಿಶೀಲನೆ ಮಾಡುತ್ತೇನೆ. ನನ್ನ ಹೆಸರು ಬಳಸಿಕೊಂಡು ಆ ರೀತಿ ಮಾಡಿದ್ರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಾಕ್ಸ್…
ಸ್ಥಳೀಯ ಶಾಸಕರು ಮಂತ್ರಿಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ
ಜಿಲ್ಲೆಯಲ್ಲಿ ಮೂವರು ಬಿಜೆಪಿ ಶಾಸಕರಿದ್ದರೂ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬುದು ನಿಜ. ಅವರು ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಅದಕ್ಕೆ ಅಸಮಾಧಾನ ಎನ್ನುವುದು ಸಮಂಜಸವಲ್ಲ. ನಾನೀಗ ಶಾಸಕನಾಗಿ, ಮಂತ್ರಿಯಾಗಿದ್ದೇನೆ. ಮುಂದೆ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವ ಆಸೆ ಇದೆ. ಹಾಗೆಯೇ ಎಲ್ಲರಿಗೂ ಬಯಕೆಗಳಿರುತ್ತವೆ. ನಿರೀಕ್ಷೆಗಳಿಗೆ ಕೊನೆ ಇಲ್ಲ. ಈ ಬಗ್ಗೆ ಸರಕಾರ ಗಮನ ಹರಿಸುತ್ತೆ ಎಂದರು.

ಬಾಕ್ಸ್..
ಪಾಲನೆಯಾಗದ ಸಾಮಾಜಿಕ ಅಂತರ

ಜಿಲ್ಲೆಯಲ್ಲಿ ಕೋವಿಡ್-19 ಲ್ಯಾಬ್ ಉದ್ಘಾಟಿಸಲು ಕೊಪ್ಪಳಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹಲವು ಸ್ಥಳಗಳಿಗೆ ಭೇಟಿ ನೀಡಿದರು. ಸಚಿವರ ಎಲ್ಲ ಕಾರ್ಯಕ್ರಮಗಳಲ್ಲೂ ಕೊರೊನಾ ನಿಯಂತ್ರಣದ ಸಾಮಾಜಿಕ ಅಂತರದ ನಿಯಮ ಎಲ್ಲೂ ಪಾಲನೆಯಾಗಲಿಲ್ಲ. ಸಚಿವರಿಂದಲೇ ಕೊರೊನಾ ನಿಯಮ ಉಲ್ಲಂಘನೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು