ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಬಿಆರ್ಎಸ್ ಎಂಎಲ್ಸಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.