Saturday, 23rd November 2024

ಕರೋನಾ ಬ್ರೇಕಿಂಗ್: 18,132 ಪ್ರಕರಣ ದೃಢ

#corona

ನವದೆಹಲಿ: ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 193 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,71,607ಕ್ಕೆ ತಲುಪಿದ್ದು, 4,50,782ಕ್ಕೆ ಸಾವಿನ ಸಂಖ್ಯೆ ಏರಿಕೆ ಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 21,563 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,93,478ಕ್ಕೆ ತಲುಪಿದೆ.

ಒಂದೇ 12,83,212 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,25,95,693 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 95,19,84,373 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.