Tuesday, 26th November 2024

2,288 ಕೋವಿಡ್ ಪ್ರಕರಣಗಳು ಪತ್ತೆ

covid

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಏರಿಳಿಕೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿ ಯಲ್ಲಿ 2,288 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,07,689ಕ್ಕೆ ಏರಿಕೆಯಾಗಿದೆ.

ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,103ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,637ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,044 ಮಂದಿ ಗುಣಮುಖರಾ ಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,63,949ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,90,50,86,706 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.