Sunday, 15th December 2024

25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆ

#covid

ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ ಎಂದು ಮಂಗಳವಾರ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸೋಂಕು ಪ್ರಕರಣಗಳ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. 354 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 4,35,110 ಮಂದಿ ಸಾವನ್ನಪ್ಪಿದ್ದಾರೆ.

ಇದು 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣವಾಗಿದೆ ಎಂದು ವರದಿ ತಿಳಿಸಿದೆ. ಕಳೆದ 24ಗಂಟೆಗಳಲ್ಲಿ 14,373ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ 50,93,91,792 ಮಂದಿಯನ್ನು ಪರೀಕ್ಷೆಗೆ ಗುರಿಪಡಿಸಲಾಗಿದೆ ಎಂದು ಅಂಕಿಅಂಶ ಹೇಳಿದೆ.