ದೆಹಲಿಯ ಮುಂಡ್ಕಾ ಪ್ರದೇಶದ ಮೂರು ಅಂತಸ್ತಿನ ಕಟ್ಟಡದಲ್ಲಿ ದಿಢೀರ್ ಬೆಂಕಿ ಹೊತ್ತಿ ಕೊಂಡಿದ್ದು, ಈ ವೇಳೆ 16 ಜನರು ಮೃತಪಟ್ಟಿ ದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಟ್ಟಡದಲ್ಲಿ ಬೆಂಕಿ ತಗುಲಿರುವ ಕರೆ ಬಂದಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಲಾಗಿದೆ. ಎರಡು ಮಹಡಿಯಲ್ಲಿ ಬೆಂಕಿ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.
ಕಟ್ಟಡದೊಳಗೆ ಸುಗಂಧ ದ್ರವ್ಯ ಮತ್ತು ಬೆಣ್ಣೆಯಂತಹ ಮಸಾಲೆ ಪದಾರ್ಥ ಇರುವುದರಿಂದ ಬೆಂಕಿಯ ಜ್ವಾಲೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಕಟ್ಟಡದಿಂದ ಕೆಳಗೆ ಜಿಗಿದಿದ್ದಾರೆ. ಇಲ್ಲಿ ಹೆಚ್ಚಾಗಿ ವಿವಿಧ ಅಂಗಡಿಗಳಿದ್ದವು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಸುಮಾರು 15 ಅಗ್ನಿಶಾಮಕ ವಾಹನ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿವೆ. ಇದೊಂದು ವಾಣಿಜ್ಯ ಕಟ್ಟಡವಾಗಿದೆ ಎಂದು ಡಿಸಿಪಿ ಸಮೀರ್ ಶರ್ಮಾ ತಿಳಿಸಿದ್ದಾರೆ. ಕಟ್ಟಡದೊಳಗೆ ಅನೇಕರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ಈಗಾಗಲೇ 26 ಮೃತದೇಹ ಹೊರತೆಗೆಯಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.