Monday, 16th September 2024

ಸೋಂಕಿತರ ಸಂಖ್ಯೆ ಸ್ವಲ್ಪ ಇಳಿಕೆ: 3,207 ಹೊಸ ಪ್ರಕರಣ ಪತ್ತೆ

covid

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್​ ಸೋಂಕಿತರ ಸಂಖ್ಯೆ ಭಾನುವಾರಕ್ಕೆ ಹೋಲಿಸಿದರೆ ಸೋಂಕಿತರ ಸಂಖ್ಯೆ ಸ್ವಲ್ಪ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 3,207 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,05,401 ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ 29 ಜನರು ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,24,093 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 20,403 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಸಿಕಾ ಅಭಿಯಾನಡಿ ಈವರೆಗೆ 1,90,34,90,396 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಭಾನುವಾರ 13,50,622 ಮಂದಿಗೆ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 3,36,776 ಮಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದೆ.