Thursday, 12th December 2024

ಕರೋನಾ ಸೋಂಕಿನಲ್ಲಿ ಏರಿಕೆ: 50,040 ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 50,040 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,02,33,183ಕ್ಕೆ ಏರಿಕೆಯಾಗಿದೆ.

1,258 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 3,95,751 ಕ್ಕೆ ಏರಿಕೆಯಾಗಿದೆ. 5,86,403 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 2,92,51,029 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, 57,944 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.