Thursday, 7th December 2023

ನಿವೃತ್ತ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ನಿರ್ಧಾರ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾ ಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ನಿರ್ಧರಿಸ ಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ.
ಸಾಕಷ್ಟು ದಿನಗಳಿಂದ ಸರ್ಕಾರಿ ನೌಕರರಿಂದ ಒತ್ತಾಯಗಳಿದ್ದವು, ಇದರಂತೆ ವೇತನ ಪರಿಷ್ಕರಣೆ ಹಾಗೂ ಸೌಲಭ್ಯಗಳ ವಿಸ್ತರಣೆಗೆ 7ನೇ ವೇತನ ಆಯೋಗ ರಚಿಸಲು ನಿರ್ಧರಿಸಲಾಗಿದೆ. ನವೆಂಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡಲಾಗು ತ್ತದೆ ಎಂದು ಭರವಸೆ ನೀಡಿದ್ದಾರೆ.

ದಾವಣಗೆರೆ ಉತ್ತರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ನಾನು ದಾವಣಗೆರೆ ಉತ್ತರದಿಂದ ಸ್ಪರ್ಧಿಸುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆ ಎಂದು ಹೇಳಿದ್ದಾರೆ.

ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜೊತೆ ಮಾತುಕತೆ ವೇಳೆ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ (ನ.8) ವೇತನ ಆಯೋಗ ರಚಿಸಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡ ಲಾಗುವುದು ಎಂದು ಭರವಸೆ ನೀಡಿದ್ದರು.

error: Content is protected !!