Thursday, 19th September 2024

Naxals encounter : 9 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಸಿಆರ್‌ಪಿಎಫ್‌ ಪಡೆ

Naxals encounter:

ಬೆಂಗಳೂರು : ಛತ್ತೀಸ್‌ಗಢದ ದಾತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ  ಎನ್‌ಕೌಂಟರ್‌ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿರ್‌ಜಿ ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡವು ಒಂಬತ್ತು ನಕ್ಸರನ್ನು(Naxals encounter) ಹೊಡೆದುರುಳಿಸಿದೆ. ಮಾವೋವಾದಿಗಳನ್ನು ಹತ್ಯೆ ಮಾಡಿರುವ ಮಾಹಿತಿಯನ್ನು ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮಾವೋವಾದಿಗಳ  ತಮ್ಮ ಕುಕೃತ್ಯಗಳನ್ನು ನಡೆಸುತ್ತಿದ್ದಾರೆ  ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಎನ್‌ಕೌಂಟರ್‌ ಬೆಳಿಗ್ಗೆ 10: 30 ರ ಸುಮಾರಿಗೆ ಪ್ರಾರಂಭವಾಯಿತು. ನಿರಂತರವಾಗಿ ನಡೆದ ಗುಂಡಿನ ಚಕಮಕಿಯಲ್ಲಿ ಒಂಬತ್ತು ನಕ್ಸಲರು ಹತ್ಯೆಯಾಗಿದ್ದರು. ಆದಾಗ್ಯೂ ಗುಂಡಿನ ದಾಳಿಯನ್ನು ಭದ್ರತಾ ಪಡೆದ ಮುಂದುವರಿಸಿದೆ.

“ಇಲ್ಲಿಯವರೆಗೆ, ಒಂಬತ್ತು ಮಾವೋವಾದಿಗಳು ಮೃತಪಟ್ಟಿದ್ದಾರೆ.,  ಸೆಲ್ಫ್-ಲೋಡಿಂಗ್ ರೈಫಲ್ (ಎಸ್ಎಲ್ಆರ್), .303 ರೈಫಲ್ ಮತ್ತು .315 ಬೋರ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಯೋಧರು ಸುರಕ್ಷಿತವಾಗಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.  ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದು ಅಧಿಕಾರಿಗಳು  ಹೇಳಿದೆ.

ಕಳೆದ ವಾರ ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಗ್ರಾಮಸ್ಥರನ್ನು ‘ಪೊಲೀಸ್ ಮಾಹಿತಿದಾರರು’ ಎಂದು ಶಂಕಿಸಿ ಹತ್ಯೆ ಮಾಡಲಾಗಿತ್ತು.

ಈ ಸುದ್ದಿಯನ್ನೂ ಓದಿ: Web series: ʻಐಸಿ 814ʼ ವಿವಾದ- ಬಿಸಿ ಮುಟ್ಟಿಸಿದ ಕೇಂದ್ರ; ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರಲ್ಲ ಎಂದ Netflix

ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಛತ್ತೀಸ್‌ಗಢಕ್ಕೆ ಭೇಟಿ ನೀಡಿದ್ದರು, ಅಲ್ಲಿ ಅವರು ಏಳು ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರೊಂದಿಗೆ ನಕ್ಸಲ್ ವಿರೋಧಿ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.