Sunday, 8th September 2024

ಅಕ್ರಮ ಆಸ್ತಿ: 60 ಕಡೆ 400 ಎಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ.

ಬುಧವಾರ 8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ಸಿಬ್ಬಂದಿಯ ತಂಡದಿಂದ 15 ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿ 60 ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದೆ.

ಬೆಂಗಳೂರು ನಗರದಲ್ಲಿ ಸಿಸಿಬಿ ಅಧಿಕಾರಿಗಳು ದಾಳಿಗೆ ಮಾಡಿದ್ದು, ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜ ಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ. ಮಸ್ತಿ ತಂಡದಿಂದ ದಾಳಿ ನಡೆದಿದೆ.

ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

error: Content is protected !!