Friday, 13th December 2024

ಭೀಕರ ಅಪಘಾತ: 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ- ಗೋವಾ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ರಾಯ್‍ಗಢ ಜಿಲ್ಲೆಯ ಮುಂಬೈ- ಗೋವಾ ಹೆದ್ದಾರಿಯ ಮಂಗಾವ್ ಪ್ರದೇಶದಲ್ಲಿ ಬೆಳಿಗ್ಗೆ ನಡೆದಿದೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇಕೋ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಘಟನೆಯಿಂದ ನಾಲ್ವರು ಮಹಿಳೆಯರು ಸೇರಿ ಒಟ್ಟು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 4 ವರ್ಷದ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋರೆಗಾಂವ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರ ಸಹಾಯದಿಂದ ಬಾಲಕನ್ನು ರಕ್ಷಿಸಿರುವುದಾಗಿ ತಿಳಿಸಿದರು.