Sunday, 15th December 2024

ಪೊಲೀಸ್ ಇಲಾಖೆಯ ಲಿಖಿತ ಪರೀಕ್ಷೆಯ ಅಭ್ಯರ್ಥಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ

ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಭಾನುವಾರ ನ.22ರಂದು ನಡೆಯಲಿರುವ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್. ಪಿ./ ಐ. ಆರ್. ಬಿ.) (ಪುರುಷ ಮತ್ತು ಮಹಿಳಾ) ಹುದ್ದೆಗಳ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ತಮ್ಮ ಊರುಗಳಿಗೆ ತೆರಳಲು ಮಧ್ಯಾಹ್ನದಿಂದ ಹೆಚ್ಚಿನ ಸಂಚಾರ ದಟ್ಟಣೆ ನಿರೀಕ್ಷಿಸ ಲಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಗದಗ,ಕೊಪ್ಪಳ,ರಾಯಚೂರು, ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಬಸ್ಸುಗಳು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ ದಿಂದ ಹೊರಡುತ್ತವೆ.

ಬೆಳಗಾವಿ, ಶಿರಸಿ, ಯಲ್ಲಾಪುರ, ಕಾರವಾರ, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ. ಶಿರಹಟ್ಟಿ,ನವಲಗುಂದ,ಅಣ್ಣಿಗೇರಿ, ಕಲಘಟಗಿ, ಕುಂದಗೋಳ,ತಡಸ ಮತ್ತಿತರ ಗ್ರಾಮೀಣ ಪ್ರದೇಶ ಗಳ ಬಸ್ಸುಗಳು ಹಳೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾಸಂ, ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.