Sunday, 15th December 2024

ಲೆಕ್ಕಪರಿಶೋಧಕ ಮುರೂರು ರಾಜೇಂದ್ರ ಕುಮಾರ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷ ತಂದಿರುವ ಕ್ರಾಂತಿಕಾರಕ ಬದಲಾವಣೆಗಳನ್ನು ಬೆಂಗಳೂರಿಗೂ ತರುವ ಒತ್ತಾಸೆ ಇಟ್ಟುಕೊಂಡು ಜೆಡಿಎಸ್ (ಜಾತ್ಯಾತೀತ ಜನತಾದಳ) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಉದ್ಯಮಿ ನಾಗಣ್ಣ ಅವರ ನೇತೃತ್ವದಲ್ಲಿ ಪ್ರಸಿದ್ದ ಲೆಕ್ಕಪರಿಶೋಧಕ ಮುರೂರು ರಾಜೇಂದ್ರ ಕುಮಾರ್‌ ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ರಾಜ್ಯ ಉಪಾಧ್ಯಕ್ಷ ಸುರೇಶ್‌ ರಾಥೋಡ್‌, ಉಸ್ತುವಾರಿ ರೋಮಿ ಬಾಟಿ ಪಕ್ಷಕ್ಕೆ ಬರಮಾಡಿಕೊಂಡರು.