ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ನಂತರ, ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆ ಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನ ಸೂರ್ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಉಮೇಶ್ ಜಾದವ್, ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಕೇಶವ್ ಪ್ರಸಾದ್ ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಚಿಂಚನಸೂರ್ ನೂರಕ್ಕೆ ನೂರು ಆಯ್ಕೆ ಆಗ್ತಾರೆ. ಚಿಂಚನಸೂರ್ ಕಾಂಗ್ರೆಸ್‌ನಲ್ಲಿದ್ದರು, ಬಿಜೆಪಿ ಗೆಲ್ಲಲು ಆ ಭಾಗದಲ್ಲಿ ಕೆಲಸ ಮಾಡಿದ್ರು. ಅವರ ಕೊಡುಗೆ ನಮ್ಮ ಪಕ್ಷಕ್ಕೆ ಅಪಾರ ಎಂದು ಹೇಳಿದರು.
ಮಂಗಳೂರು ಪ್ರವೀಣ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎರಡು ದಿನದಲ್ಲಿ ವರದಿ ಬರಲಿದೆ. ಸಂಪೂರ್ಣ ವರದಿ ಬಂದ ಬಳಿಕ ಸತ್ಯ ಹೊರ ಬರಲಿದೆ ಎಂದು ಹೇಳಿದರು.