Sunday, 15th December 2024

ಎಸ್.ಜೈಶಂಕರ್ ನಾಳೆ ಬಾಂಗ್ಲಾದೇಶ ಭೇಟಿ

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಹಾಗೂ ಬಲಪಡಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ನಾಳೆ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ.

ಜೈಶಂಕರ್ ಅವರು ಪ್ರಧಾನಿ ಹಸೀನಾ ಅವರನ್ನು ಭೇಟಿ ಮಾಡುವ ನಿರೀಕ್ಷೆ ಯಿದ್ದು, ಈ ವೇಳೆ ಸಚಿವರು ತಮ್ಮ ಬಾಂಗ್ಲಾದೇಶದ ಸಹವರ್ತಿ ಎ.ಕೆ.ಅಬ್ದುಲ್ ಮೊಮೆನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಕಳೆದ ವರ್ಷ ಮಾರ್ಚ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವ ಮತ್ತು ಆ ದೇಶದ ವಿಮೋಚನಾ ಯುದ್ಧದ 50 ವರ್ಷಗಳ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು.