ಪಾವಗಡ: ಗುರುವಾರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕಿನ ಶಿಕ್ಷಕರಿಗೆ ಪುನಶ್ಚೇತನ ಮತ್ತು ಬಿಗಿನರ್ಸ್ ಕೋರ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಪವನ್ ಕುಮಾರ್ ರೆಡ್ಡಿ ತಾಲೂಕಿನ ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಸವರಾಜು, ಜಿಲ್ಲಾ ಆಯುಕ್ತ ಭಾಸ್ಕರ್ ರೆಡ್ಡಿ, ತಾಲೂಕಿನ ಸ್ಕೌಟ್ ಗೈಡ್ ನ ಅಧ್ಯಕ್ಷ ಕಮಲ್ ಬಾಬು, ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಮೂರ್ತಿ, ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾದ ಸಿಂದಗಿ ಕರವರ ಜಿ ಜೆ ಸಿ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಧನಂಜಯ, ತಾಲೂಕಿನ ಸ್ಕೌಟ್ಸ್ ಅಂಡ್ ಗೈಡ್ಸ್ ನ ಉಪಾಧ್ಯಕ್ಷರಾದ ಮಾನಂ ಶಶಿಕಿರಣ್, ಯಜಮಾನ ನಾಗೇಂದ್ರ ಅವರ ಬ್ರೈಟ್ ಫ್ಯೂಚರ್ ಕಂಪ್ಯೂಟರ್’ನ ಶ್ರೀಧರ ಗುಪ್ತ ಖಜಾಂಚಿ ಗಳಾದ ಲೋಕೇಶ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹನುಮಂತರಾಯಪ್ಪನವರು ರೇಂಜರ್ಸ್ ವಿದ್ಯಾರ್ಥಿಗಳು ಮತ್ತು ತಾಲೂಕಿನ ನೂರು ಜನ ಶಿಕ್ಷಕರು ಮತ್ತು ಪರೋಕ್ಷವಾಗಿ ಸಹಕರಿಸಿದ ತಾಲೂಕಿನ ಸ್ಕೌಟ್ಸ್ ಅಂಡ್ ಗೈಡ್ಸ್ ನ ಎಲ್ಲಾ ಪದಾಧಿಕಾರಿಗಳಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿ ಕೊಟ್ಟಿದ್ದಕ್ಕೆ ಪಾವಗಡ ತಾಲೂಕಿನ ಸ್ಕೌಟ್ಸ್ ಅಂಡ್ ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಪರವಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಪಾವಗಡ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.