Friday, 12th April 2024

ಮಾಜಿ ಸಚಿವ ವರ್ತೂರ್​ ಪ್ರಕಾಶ್’​ಗೆ ಬಿರಿಯಾನಿ ಊಟ ತಂದ ಸಂಕಷ್ಟ ?

ಕೋಲಾರ: ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೋಲಾರ ನಗರದ ಎ.ಎಪ್ ಕಲ್ಯಾಣ ಮಂಟಪದಲ್ಲಿ ಸಭೆ ಮಾಡಿ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕರೋನಾ ನಿಯಮ ಉಲ್ಲಂಘನೆ ಮಾಡಿ ಊಟ ಹಾಕಿಸಿದ್ದ ಹಿನ್ನೆಲೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

‘ನಮ್ಮ ಕಾಂಗ್ರೆಸ್​’ನ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೂಲೂರು ಅಂಜಿನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್, ಎ.ಎಫ್. ಕನ್ವೆಂಕ್ಷನ್ ಹಾಲ್ ಮಾಲೀಕ ಸೇರಿ 105 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕರೋನಾ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ರೆವಿನ್ಯೂ ಇನ್ಸ್​ಪೆಕ್ಟರ್​ ವಿಜಯ ದೇವ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!