Sunday, 8th September 2024

ಬ್ಲ್ಯಾಕ್ ಫಂಗಸ್’ಗೆ ಚಿಕಿತ್ಸೆ: ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದು 19,420 ಸೀಸೆ ಹಂಚಿಕೆ

ನವದೆಹಲಿ : ಬ್ಲ್ಯಾಕ್ ಫಂಗಸ್‌ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ, ಮೊನ್ನೆ 1270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1660 ವಯಲ್ಸ್ ಒದಗಿಸಲಾಗಿತ್ತು ಎಂದರು.

ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಸೀಸೆ ಲಿಪೋಸೊಮಾಲ್ ಎಂಫೋಟೆರಿಸಿನ್ ಬಿ ಉತ್ಪಾದನೆ ಮಾಡಲಿವೆ ಎಂದರು.

ಮೈಲಾನ್ ಕಂಪನಿ ಮೂಲಕ ಮೇ ತಿಂಗಳ ಒಳಗಾಗಿ 3.63 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಆಮದು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಜೂನ್ ತಿಂಗಳಲ್ಲಿ 3.15 ಲಕ್ಷ ವಯಲ್ಸ್ ಆಮದು ಮಾಡಿಕೊಳ್ಳಲಾಗುತ್ತಿದೆ. ಅಗತ್ಯವಾದರೆ ಇನ್ನೂ ಹೆಚ್ಚು ಆಮದು ಮಾಡಿಕೊಳ್ಳು ತ್ತೇವೆ. ಕಪ್ಪುಶಿಲೀಂದ್ರ ಹಳೆ ಕಾಯಿಲೆಯಾಗಿದ್ದು ಇದಕ್ಕೆ ಸಾಕಷ್ಟು ಪರ್ಯಾಯ ಔಷಧಗಳು ಲಭ್ಯವಿವೆ. ಹಾಗಾಗಿ ಇದಕ್ಕೆ ಔಷಧ ಕೊರತೆಯಾಗಬಹುದು ಎಂದು ಗಾಬರಿಗೊಳಗಾಗಬೇಡಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದರು.

Leave a Reply

Your email address will not be published. Required fields are marked *

error: Content is protected !!