Saturday, 27th April 2024

ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ: ಸಿದ್ದಲಿಂಗಸ್ವಾಮೀಜಿ ಅಸಮಾಧಾನ

ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುವುದು ಅವಶ್ಯಕವಿಲ್ಲ ಎಂದು ಸಿದ್ದಲಿಂಗಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಯಲ್ಲಿ ಎಲ್ಲಾ ಸಮಾಜದವರಿದ್ದಾರೆ. ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಅಂತವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಸರಕಾರ ಮಾಡಿದರೆ ಒಳ್ಳೆಯದು ಎಂದರು. ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಎಲ್ಲಾ ಸಮಾಜದಲ್ಲೂ ತುಂಬಾ ಬಡವರಿದ್ದಾರೆ. ಬಡತನದ ಶ್ರೇಣಿ ಹೆಚ್ಚಿದೆ. ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು ಎಂದು ಸಲಹೆ ನೀಡಿದರು.

ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಕೊನೆ ಅನ್ನುವುದೇ ಇರುವುದಿಲ್ಲ. ಸರಕಾರ ಇರುವುದು ರಾಜ್ಯದ ಅಭಿವೃದ್ಧಿಗೋಸ್ಕರ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಕೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!