Saturday, 9th December 2023

ಸಾಹುಕಾರನಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣಕ್ಕೆ ಮರುಜೀವ

ramesh jarkiholi

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಚಿಕ್ಕೋಡಿ ನ್ಯಾಯಾಲಯದ ಆದೇಶ ಕಾನೂನು ರೀತಿಯಲ್ಲ ಎಂದು ತಿಳಿಸಿದೆ.

ಖಾಸಗಿ ದೂರು ದಾಖಲಿಸಿದ ದಿನಾಂಕದಿಂದ ಮರು ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!