Friday, 22nd November 2024

ಹಿಮಾಚಲ ಪ್ರದೇಶ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶಿಮ್ಲಾ: ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, 30 ಯುನಿಟ್ ಉಚಿತ ವಿದ್ಯುತ್ ಪೂರೈಕೆ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ 10 ಕೋಟಿ ಸ್ಟಾರ್ಟ್ ಅಫ್ ಫಂಡ್ ನೀಡುವುದಾಗಿ ಘೋಷಿಸಿದೆ.ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಮಾಜಿ ಪಿಸಿಸಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖು ಮತ್ತು ಐಸಿಸಿ ಕಾರ್ಯದರ್ಶಿ ತೇಜಿಂದರ್ ಪಾಲ್ ಮತ್ತಿತರರು ಉಪಸ್ಥಿತರಿದ್ದರು. ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ.
ಐದು ವರ್ಷಗಳ ಹಿಂದೆ ಘೋಷಿಸಲಾಗಿದ್ದ ಭರವಸೆಗಳನ್ನು ಪೂರ್ಣಗೊಳಿಸಿಲ್ಲ ಎಂದು ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಧಾನಿ ರಾಮ್ ಶಂದಿಲ್ ಆರೋಪಿಸಿದರು.
ಇದು ಕೇವಲ ಚುನಾವಣಾ ಪ್ರಣಾಳಿಕೆಯಲ್ಲ ಆದರೆ, ಹಿಮಾಚಲ ಪ್ರದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ದಾಖಲೆ ತಯಾರಿಸಲಾಗಿದ ಎಂದು ಶಂದಿಲ್ ಹೇಳಿದರು. ಆಡಳಿತಾವಿರೋಧಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಿದ್ದು, ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರದಂತೆ ಜನರಲ್ಲಿ ಮನವಿ ಮಾಡುತ್ತಿದೆ.