Thursday, 12th December 2024

ಸಿಬಿಐ ಕಚೇರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಮಧ್ಯಾಹ್ನ ಸಿಬಿಐ ಕಚೇರಿಗೆ ಆಗಮಿಸಿದರು. ಸಿಬಿಐ ಸಮನ್ಸ್​ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸಲು ಆಗಮಿಸಿದರು.

ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್​ ಹೆಗ್ಡೆ ಪುತ್ರ ಅಮರ್ತ್ಯ ಅವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆದ ದಿನವೇ ಡಿಕೆಶಿ ಕಚೇರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ಆದರೆ ನ.23, 24ರಂದು ಡಿಕೆಶಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಹಿನ್ನೆಲೆಯಲ್ಲಿ ನ.25ರ ಸಿಬಿಐ ಕಚೇರಿಗೆ ಹಾಜರಾಗುವುದಾಗಿ ಹೇಳಿದ್ದರು.

ಅಕ್ಟೋಬರ್ 5ರಂದು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದರು.  74.93 ಕೋಟಿ ರೂ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಡಿಕೆಶಿ ಮೇಲಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದ ಸಿಬಿಐ, ಡಿಕೆ ಸಹೋದರರ ಮನೆ ಸೇರಿ ಒಟ್ಟು 14 ಕಡೆ ದಾಳಿ ಮಾಡಿತ್ತು.