Saturday, 14th December 2024

ಇ-ಕೆವೈಸಿ ಕಡ್ಡಾಯ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬ೦ಧಪಟ್ಟ ನ್ಯಾಯಬೆಲೆ ಅಂಗಡಿ ಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಕೋರಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ:1967ಗೆ ಸಂಪರ್ಕಿಸುವ೦ತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.